ಶನಿವಾರ, ಮಾರ್ಚ್ 6, 2021
31 °C

ಅತ್ಯಾಚಾರಕ್ಕೊಳಗಾಗಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಅಪ್ರಾಪ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ನವದೆಹಲಿ: ಮೂವರು ವ್ಯಕ್ತಿಗಳಿಂದ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ನೊಂದ 14 ವರ್ಷದ ಅಪ್ರಾಪ್ತೆಯೊಬ್ಬಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಬೆತುಲ್‌ನಲ್ಲಿ ನಡೆದಿದೆ.

ಸಂತ್ರಸ್ತೆಯು ಶೇ 90ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದು ಗಂಭೀರ ಸ್ಥಿತಿಯಲ್ಲಿದ್ದಾಳೆ. ಹೆಚ್ಚಿನ ಚಿಕಿತ್ಸೆಗಾಗಿ ಆಕೆಯನ್ನು ನಾಗಪುರದ ಆಸ್ಪತ್ರೆಗೆ ದಾಖಲಿಸುವಂತೆ ವೈದ್ಯರು ತಿಳಿಸಿದ್ದಾರೆ. 

ಸದ್ಯ ಬಾಲಕಿಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಈ ವೇಳೆ ನೀಡಿರುವ ಹೇಳಿಕೆಯಲ್ಲಿ, ಕೆಲ ಜನರು ನನ್ನ ಮೇಲೆ ಅತ್ಯಾಚಾರ ಎಸಗಿದರು ಎಂದು ತಿಳಿಸಿದ್ದಾಳೆ. ನಮ್ಮ ತಂಡವು ತನಿಖೆ ಕೈಗೊಂಡಿದೆ ಎಂದು ಎಸ್‌ಪಿ ಡಿ.ಎಸ್. ಭದೌರಿಯ ತಿಳಿಸಿದ್ದಾರೆ.

ಸ್ಥಳೀಯ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದು, ಆರೋಪಿಗಳಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ ಎಂದು ಸುದ್ದಿಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು