ಗುರುವಾರ , ನವೆಂಬರ್ 14, 2019
22 °C

ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ, ಆರೋಪಿ ಬಂಧನ

Published:
Updated:

ಗುರುಗ್ರಾಮ: ನೆರೆಮನೆಯ ಅಪ್ರಾಪ್ತ ಬಾಲಕಿಯನ್ನು ನಿರಂತರವಾಗಿ ಅತ್ಯಾಚಾರ ಎಸಗಿರುವ ಆರೋಪದ ಮೇಲೆ 22 ವರ್ಷದ ಆರೋಪಿಯನ್ನು ಹರಿಯಾಣದ ಗುರುಗ್ರಾಮದಲ್ಲಿ ಪೊಲೀಸರು ಬಂಧಿಸಿದ್ದಾರೆ.

ನಾಲ್ಕು ತಿಂಗಳಿಂದಲೂ ಆರೋಪಿ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಹೊಟ್ಟೆ ನೋವು ಎಂದು ಆಸ್ಪತ್ರೆಗೆ ದಾಖಲಾದ ವೇಳೆಯಲ್ಲಿ ಈ ವಿಚಾರ ಬೆಳಕಿಗೆ ಬಂದಿದ್ದು, ಅತ್ಯಾಚಾರ ಸಂತ್ರಸ್ತೆ ಗರ್ಭಿಣಿಯಾಗಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಆರೋಪಿಯು ಜುಲೈನಲ್ಲಿ ಭೇಟಿಯಾಗಿದ್ದ. ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಆರೋಪಿ ಬಾಲಕಿಯನ್ನು ಭೇಟಿ ಮಾಡಿದ್ದಂದಿನಿಂದಲೂ ನಿರಂತರ ಅತ್ಯಾಚಾರ ಎಸಗಿದ್ದಾನೆ. ಆರೋಪಿ ವಿರುದ್ಧಐಪಿಸಿ ಸೆಕ್ಷನ್ 506 ಮತ್ತು ಪೊಕ್ಸೊ ಕಾಯಿದೆಯಡಿ ಪ್ರಕರಣ ದಾಖಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಕರಣ್ ಗೋಯಲ್ ತಿಳಿಸಿದ್ದಾರೆ.

ಸದ್ಯ ಬಾಲಕಿಯ ವೈದ್ಯಕೀಯ ವರದಿಗಾಗಿ ಕಾಯುತ್ತಿದ್ದು, ಒಂದು ವೇಳೆ ಬಾಲಕಿ ವೈದ್ಯಕೀಯವಾಗಿ ಫಿಟ್ ಎಂದು ಅನ್ನಿಸಿದರೆ ಗರ್ಭಪಾತ ಮಾಡುವುದಾಗಿ ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)