ಮಂಗಳವಾರ, ಫೆಬ್ರವರಿ 25, 2020
19 °C

ಭೂಗತ ಪಾತಕಿ ಮಿರ್ಚಿ ಪ್ರಕರಣ: ₹600 ಕೋಟಿ ಸ್ವತ್ತು ವಶಕ್ಕೆ ಪಡೆದ ಇ.ಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಭೂಗತ ಪಾತಕಿ ಇಕ್ಬಾಲ್ ಮಿರ್ಚಿ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ, ₹600 ಕೋಟಿ ಮೌಲ್ಯದ ಸ್ವತ್ತು ವಶಪಡಿಸಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಬುಧವಾರ ಹೇಳಿದೆ.

ಸೋಮವಾರವಷ್ಟೆ ಪ್ರಕರಣ ಸಂಬಂಧ ಮುಂಬೈನ ವಿಶೇಷ ನ್ಯಾಯಾಲಯಕ್ಕೆ ಇ.ಡಿ ಆರೋಪಪಟ್ಟಿ ಸಲ್ಲಿಸಿತ್ತು.

‘ಮಿರ್ಚಿ ತನ್ನ ಕುಟುಂಬ ಸದಸ್ಯರ ಹೆಸರಿನಲ್ಲಿ ಈ ಸ್ವತ್ತುಗಳನ್ನು ಖರೀದಿಸಿದ್ದ. ಈ ಸಂಬಂಧ, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಇಲ್ಲಿಯವರೆಗೆ ನಾಲ್ವರನ್ನು ಬಂಧಿಸಲಾಗಿದೆ. 2013ರಲ್ಲಿ ಲಂಡನ್‌ನಲ್ಲಿ ಮೃತಪಟ್ಟ ಮಿರ್ಚಿ, ದಾವೂದ್ ಇಬ್ರಾಹಿಂ ಸಹಚರನಾಗಿದ್ದ. ಅಂತರರಾಷ್ಟ್ರೀಯ ಮಟ್ಟದಲ್ಲಿ ಮಾದಕ ವಸ್ತು ಕಳ್ಳಸಾಗಣೆ ಮಾಡುತ್ತಿದ್ದ ಈತ ದೇಶ ವಿದೇಶಗಳಲ್ಲಿ ಸಾಕಷ್ಟು ಸ್ಥಿರಾಸ್ತಿ ಖರೀದಿಸಿದ್ದ’ ಎಂದು ಇ.ಡಿ ತಿಳಿಸಿದೆ.

ಮುಂಬೈ ಪೊಲೀಸರು ದಾಖಲಿಸಿಕೊಂಡ ವಿವಿಧ ಎಫ್‌ಐಆರ್‌ಗಳನ್ನು ಆಧರಿಸಿ ಇ.ಡಿ ಈ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು