ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀತಿ ಸಂಹಿತೆ ಉಲ್ಲಂಘನೆ; ಮೋದಿ ತನಿಖೆಗೆ ಚುನಾವಣಾ ಆಯೋಗ ಸೂಚನೆ

Last Updated 28 ಮಾರ್ಚ್ 2019, 8:47 IST
ಅಕ್ಷರ ಗಾತ್ರ

ನವದೆಹಲಿ: ಪ್ರಧಾನಿನರೇಂದ್ರ ಮೋದಿ ಅವರು ಉಪಗ್ರಹವನ್ನು ಹೊಡೆದುರುಳಿಸುವ ಉಪಗ್ರಹ ನಿರೋಧಕ ಕ್ಷಿಪಣಿಯಪರೀಕ್ಷೆ ಕುರಿತು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿರುವುದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಎಂದು ವಿರೋಧ ಪಕ್ಷಗಳು ಚುನಾವಣಾ ಆಯೋಗ ರಚಿಸಿರುವ ಕಣ್ಗಾವಲು ಸಮಿತಿಗೆ ದೂರು ನೀಡಿವೆ.

ದೂರನ್ನು ಗಂಭೀರವಾಗಿ ಪರಿಗಣಿಸಿದ ಚುನಾವಣಾ ಆಯೋಗ ತಕ್ಷಣವೇ ಈ ಬಗ್ಗೆಪರಿಶೀಲನೆ ನಡೆಸಬೇಕೆಂದು ಆಯೋಗದ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಆಯೋಗದ ವಕ್ತಾರ ಶೈಪಾಲಿ ಶರಣ್, ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಕುರಿತು ತಕ್ಷಣವೇ ತನಿಖೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಚುನಾವಣಾ ಆಯೋಗವು ನಿರ್ದೇಶಿಸಿರುವ ಬಗ್ಗೆಟ್ವೀಟ್ ಮಾಡಿದ್ದಾರೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ‘ಉಪಗ್ರಹವನ್ನು ಹೊಡೆದುರುಳಿಸುವ ಉಪಗ್ರಹ ನಿರೋಧಕ ಕ್ಷಿಪಣಿಯಪರೀಕ್ಷೆ ನಡೆದಿರುವ ಕುರಿತು ರಕ್ಷಣಾ ಸಚಿವಾಲಯದ ವಿಜ್ಞಾನಿಗಳು ಘೋಷಿಸಬೇಕೇ ಹೊರತು ಮೋದಿಯಲ್ಲ’ ಎಂದು ಹರಿಹಾಯ್ದಿದ್ದಾರೆ.

ಇನ್ನು ಕಮ್ಯೂನಿಷ್ಟ್ ಪಾರ್ಟಿ ಆಫ್ ಇಂಡಿಯಾ ಪಕ್ಷವೂ, ಇದೊಂದು ನೀತಿ ಸಂಹಿತೆಯ ಉಲ್ಲಂಘನೆ ಎಂದು ಆಯೋಗಕ್ಕೆ ಪತ್ರ ಬರೆದಿದೆ.

ನರೇಂದ್ರ ಮೋದಿ ಅವರು ದೇಶದ ಭದ್ರತೆಗೆ ಸಂಬಂಧಿಸಿದಂತೆ ಮಾತನಾಡಿರುವ ಕಾರಣ ನೀತಿ ಸಂಹಿತೆ ಉಲ್ಲಂಘನೆಯಾಗುವುದಿಲ್ಲ ಎಂದು ಆಯೋಗದ ಅಧಿಕಾರಿ ಪಿಟಿಐಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT