ಅತ್ಯಾಚಾರ ಆರೋಪ ಮಾಡಿದ್ದ ಮಹಿಳೆ ಜತೆ ಶಾಸಕರ ಮದುವೆ

ಸೋಮವಾರ, ಜೂನ್ 17, 2019
27 °C

ಅತ್ಯಾಚಾರ ಆರೋಪ ಮಾಡಿದ್ದ ಮಹಿಳೆ ಜತೆ ಶಾಸಕರ ಮದುವೆ

Published:
Updated:

ಅಗರ್ತಲ: ಅತ್ಯಾಚಾರದ ಆರೋಪ ಮಾಡಿದ್ದ ಮಹಿಳೆಯ ಜೊತೆ ಶಾಸಕ ಧನಂಜಯ್‌ ತ್ರಿಪುರ ಅವರು ವಿವಾಹವಾಗಿದ್ದಾರೆ. 

‘ಇಲ್ಲಿಯ ಚತುರ್ದಾಸ್‌ ದೇವತಾ ದೇವಸ್ಥಾನದಲ್ಲಿ ಭಾನುವಾರ ವಿವಾಹವಾಗಿದ್ದೇನೆ’ ಎಂದು ಇಂಡಿಜಿನಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರ (ಐಪಿಎಫ್‌ಟಿ)ಪಕ್ಷದ ಶಾಸಕ ಧನಂಜಯ್‌ ಮಾಧ್ಯಮಗಳಿಗೆ ತಿಳಿಸಿದ್ದಾರೆ.

‘ವಧು, ವರನ ಕಡೆಯವರು ರಾಜಿ ಮಾಡಿಕೊಂಡಿದ್ದಾರೆ. ವಿವಾಹ ಪ್ರಮಾಣಪತ್ರ ಪಡೆಯಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ದಾಖಲೆಗಳನ್ನು ನೀಡಲಾಗಿದೆ’ ಎಂದು ಶಾಸಕರ ಪರ ವಕೀಲ ಅಮಿತ್‌ ತಿಳಿಸಿದ್ದಾರೆ. 

‘ಶಾಸಕ ಧನಂಜಯ್‌ ನನ್ನೊಂದಿಗೆ ದೈಹಿಕ ಸಂಬಂಧ ಹೊಂದಿದ್ದರು. ವಿವಾಹವಾಗಲು ನಿರಾಕರಿಸುತ್ತಿದ್ದಾರೆ’ ಎಂದು ಮಹಿಳೆ ಕಳೆದ ಮೇ 20ರಂದು ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದರು. 

ಶಾಸಕರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ, ಜೂನ್‌ 1ರಂದು ತ್ರಿಪುರ ಹೈಕೋರ್ಟ್‌ ಶಾಸಕರಿಗೆ ನಿರೀಕ್ಷಣಾ ಜಾಮೀನು ತಿರಸ್ಕರಿಸಿತ್ತು.  

 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 4

  Happy
 • 0

  Amused
 • 0

  Sad
 • 1

  Frustrated
 • 4

  Angry

Comments:

0 comments

Write the first review for this !