ಶನಿವಾರ, ಫೆಬ್ರವರಿ 29, 2020
19 °C

ನಿರ್ಭಯಾ ಅತ್ಯಾಚಾರ ಅಪರಾಧಿಯ ಕ್ಷಮಾದಾನ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ನಿರ್ಭಯಾ ಅತ್ಯಾಚಾರ, ಕೊಲೆ ಪ್ರಕರಣದ ಅಪರಾಧಿ ಸಲ್ಲಿಸಿರುವ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್ ಶುಕ್ರವಾರ ತಿರಸ್ಕರಿಸಿದ್ದಾರೆ. 

ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸುವಂತೆ ಗೃಹ ಸಚಿವಾಲಯವು ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಿತ್ತು. ಅಪರಾಧಿ ಮುಕೇಶ್ ಸಿಂಗ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ದೆಹಲಿ ಸರ್ಕಾರ ಗುರುವಾರ ತಿರಸ್ಕರಿಸಿತ್ತು. ಬಳಿಕ ಅರ್ಜಿಯನ್ನು ಕೇಂದ್ರ ಗೃಹ ಸಚಿವಾಲಯಕ್ಕೆ ಕಳುಹಿಸಲಾಗಿತ್ತು.

ಇದನ್ನೂ ಓದಿ: ನಿರ್ಭಯಾಗೆ ನ್ಯಾಯ ದೊರಕಿಸಲು ರಾಜಕೀಯ ಮಾಡಬೇಡಿ: ತಾಯಿ ಅಳಲು

‘ಅರ್ಜಿ ತಿರಸ್ಕರಿಸುವಂತೆ ದೆಹಲಿ ರಾಜ್ಯಪಾಲರು ಮಾಡಿದ್ದ ಶಿಫಾರಸನ್ನೇ ಗೃಹ ಸಚಿವಾಲಯ ಎತ್ತಿಹಿಡಿದಿದೆ’ ಎಂದು ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದರು. 

ಅಪರಾಧಿಯೊಬ್ಬ ರಾಷ್ಟ್ರಪತಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ‘ನಿರ್ಭಯಾ’ ಅತ್ಯಾಚಾರ ಪ್ರಕರಣದ ಅಪರಾಧಿಗಳಿಗೆ ಈ ಹಿಂದೆ ಘೋಷಿಸಿದ್ದಂತೆ ಜ.22ರಂದು ಮರಣದಂಡನೆ ಜಾರಿ ಮಾಡಲು ಸಾಧ್ಯವಿಲ್ಲ ಎಂದು ದೆಹಲಿ ಸರ್ಕಾರ ಜ.15ರಂದು ತಿಳಿಸಿತ್ತು. ಈ ಮಧ್ಯೆ, ನಿರ್ಭಯಾ ಪ್ರಕರಣದ ಅಪರಾಧಿಗಳಿಗೆ ನಿಗದಿಯಾಗಿರುವ ಮರಣದಂಡನೆ ಪ್ರಕ್ರಿಯೆಯ ಪ್ರಸ್ತುತ ಸ್ಥಿತಿಯ ಬಗ್ಗೆ ವರದಿ ನೀಡುವಂತೆ ತಿಹಾರ್‌ ಜೈಲು ಅಧಿಕಾರಿಗಳಿಗೆ ದೆಹಲಿ ಕೋರ್ಟ್‌ ಗುರುವಾರ ನಿರ್ದೇಶಿಸಿತ್ತು.

ಇದನ್ನೂ ಓದಿ: ನಿರ್ಭಯಾ ಅತ್ಯಾಚಾರ ಅಪರಾಧಿಗಳಿಗೆ ಗಲ್ಲು: ನೇಣಿಗೇರಿಸುವ ಮುನ್ನ ಏನೇನು ಮಾಡ್ತಾರೆ?

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು