ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸಲು ಆ್ಯಪ್‌

7

ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸಲು ಆ್ಯಪ್‌

Published:
Updated:
Passport

ನವದೆಹಲಿ: ಪಾಸ್‌ಪೋರ್ಟ್‌ ಕಚೇರಿಗೆ ಹೋಗದೆಯೇ ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸುವುದಕ್ಕಾಗಿ ಸ್ಮಾರ್ಟ್‌ ಫೋನ್‌ ಆ್ಯಪ್‌ ಒಂದಕ್ಕೆ ಕೇಂದ್ರ ಸರ್ಕಾರ ಮಂಗಳವಾರ ಚಾಲನೆ ನೀಡಿದೆ. 

ದೆಹಲಿಯಲ್ಲಿ ನೆಲೆಸಿರುವ ಹುಬ್ಬಳ್ಳಿಯ ವ್ಯಕ್ತಿಯೊಬ್ಬರು ಈ ಆ್ಯಪ್‌ ಮೂಲಕ ಬೆಂಗಳೂರು ಪ್ರಾದೇಶಿಕ ಪಾಸ್‌ಪೋರ್ಟ್‌ ಕಚೇರಿಯ ವ್ಯಾಪ್ತಿಯಲ್ಲಿರುವ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಅಥವಾ ಅಂಚೆ ಕಚೇರಿ ಪಾಸ್‌ಪೋರ್ಟ್‌ ಸೇವಾ ಕೇಂದ್ರಕ್ಕೆ ಅರ್ಜಿ ಸಲ್ಲಿಸಬಹುದು. ಇದಕ್ಕಾಗಿ ಹುಬ್ಬಳ್ಳಿ ಅಥವಾ ಬೆಂಗಳೂರಿಗೆ ಹೋಗುವ ಅಗತ್ಯ ಇಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ. 

ಪೊಲೀಸ್‌ ಪರಿಶೀಲನೆ ಅಗತ್ಯ ಇದ್ದರೆ ಅದು ಹುಬ್ಬಳ್ಳಿಯಲ್ಲಿ ನಡೆಯುತ್ತದೆ. ಅದಾದ ಬಳಿಕ, ಪಾಸ್‌ಪೋರ್ಟನ್ನು ಅರ್ಜಿದಾರರು ನೀಡಿದ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಲಾಗುತ್ತದೆ. 

ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ಅವರು ಆ್ಯಪ್‌ಗೆ ಚಾಲನೆ ನೀಡಿದರು. ಪ್ರತಿ ಲೋಕಸಭಾ ಕ್ಷೇತ್ರದಲ್ಲಿ ಕನಿಷ್ಠ ಒಂದು ಪಾಸ್‌ಪೋರ್ಟ್‌ ಕಚೇರಿ ಸ್ಥಾಪಿಸುವ ಗುರಿ ಇದೆ ಎಂದು ಅವರು ಹೇಳಿದರು. 

Tags: 

ಬರಹ ಇಷ್ಟವಾಯಿತೆ?

 • 3

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !