ಸೋಮವಾರ, ಜುಲೈ 13, 2020
29 °C

ಆರು ದಶಕಗಳ ಐತಿಹಾಸಿಕ ತಪ್ಪುಗಳನ್ನು ಸರಿಪಡಿಸಿದ ಮೋದಿ ಸರ್ಕಾರ: ಅಮಿತ್‌ ಶಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಆರು ದಶಕಗಳಲ್ಲಿ ಸಂಭವಿಸಿದ ಐತಿಹಾಸಿಕ ತಪ್ಪುಗಳನ್ನು ನರೇಂದ್ರ ಮೋದಿ ಅವರು ಕೇವಲ ಆರು ವರ್ಷಗಳ ತಮ್ಮ ಆಡಳಿತದಲ್ಲಿ ಸರಿಪಡಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅಭಿಪ್ರಾಯಪಟ್ಟಿದ್ದಾರೆ. 

ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿಯ ಎರಡನೇ ಅವಧಿಯ ಸರ್ಕಾರ ಮೇ. 30ರಂದು ಒಂದು ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಅವರು ಸರಣಿ ಟ್ವೀಟ್‌ ಮೂಲಕ ಮೋದಿ ಅವರಿಗೆ ಶುಭ ಕೋರಿದ್ದಾರೆ. 

‘ಮೋದಿ 2.0’ ರ ಯಶಸ್ವಿ ಒಂದು ವರ್ಷದ ಆಡಳಿತ ಪೂರೈಸಿರುವ ದೇಶದ ಜನಪ್ರಿಯ ಪ್ರಧಾನಿ ನರೇಂದ್ರ ಮೋದಿಯವರನ್ನು ನಾನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. ಇದು ಐತಿಹಾಸಿಕ ಸಾಧನೆಗಳಿಂದ ತುಂಬಿದ ಸರ್ಕಾರ,’ ಎಂದು ಅವರು ಹೇಳಿದ್ದಾರೆ.  

‘ಈ ಆರು ವರ್ಷಗಳಲ್ಲಿ ಮೋದಿ ಅವರು ಅನೇಕ ಐತಿಹಾಸಿಕ ತಪ್ಪುಗಳನ್ನು ಸರಿಪಡಿಸಿದ್ದಾರೆ. ಅಲ್ಲದೆ, 6 ದಶಕಗಳಲ್ಲಿ ಸೃಷ್ಟಿಯಾಗಿದ್ದ ಶೂನ್ಯವನ್ನು ಅವರು ತುಂಬಿದ್ದಾರೆ. ಈ ಮೂಲಕ ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ಸ್ವಾವಲಂಬಿ ಭಾರತಕ್ಕೆ ಅಡಿಪಾಯಹಾಕಿದ್ದಾರೆ. ಈ 6 ವರ್ಷಗಳ ಅವಧಿಯು ಸಮಾನಾಂತರ ಸಮನ್ವಯ, ಬಡವರ ಕಲ್ಯಾಣ ಮತ್ತು ಆರ್ಥಿಕ ಸುಧಾರಣೆಗಳಿಗೆ ಒಂದು ಉತ್ತಮ ಉದಾಹರಣೆಯಾಗಿದೆ. ಇದರಲ್ಲಿ ನಾನೂ ಭಾಗಿಯಾಗಿದ್ದೇನೆ ಎಂಬುದು ನನಗೆ ಸಂತೋಷ ಉಂಟುಮಾಡಿದೆ,’ ಎಂದು ಶಾ ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

‘ಮೋದಿಯವರನ್ನು ಆಯ್ಕೆ ಮಾಡಿದ ಮತ್ತು ದೇಶದ ಬೆಳವಣಿಗೆಗೆ ಸಹಕರಿಸಿದ ಜನರಿಗೆ ನಾನು ನಮಸ್ಕರಿಸುತ್ತೇನೆ" ಎಂದು ಅವರು ಹೇಳಿದ್ದಾರೆ. 

ಕಳೆದ ಆರು ವರ್ಷಗಳಲ್ಲಿ ಪಕ್ಷದ ಸಾಧನೆಗಳು ಮತ್ತು ಅದರ ಕಲ್ಯಾಣ ಯೋಜನೆಗಳನ್ನು ಜನರಿಗೆ ತಲುಪಿಸಿದ್ದಕ್ಕಾಗಿ ಕೇಂದ್ರ ಗೃಹ ಸಚಿವ ಶಾ ಬಿಜೆಪಿ ಕಾರ್ಯಕರ್ತರಿಗೆ ಕೃತಜ್ಞತೆಯನ್ನೂ ಸಲ್ಲಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು