ಗುರುವಾರ , ಫೆಬ್ರವರಿ 27, 2020
19 °C

ಹಿಂದೂ–ಮುಸ್ಲಿಂ ನಡುವಿನ ಬೆಂಕಿಗೆ ಸಿಎಎ ತುಪ್ಪ ಸುರಿಯುತ್ತಿದೆ: ಕನ್ಹಯ್ಯ ಕುಮಾರ್

ಪಿಟಿಐ Updated:

ಅಕ್ಷರ ಗಾತ್ರ : | |

prajavani

ಔರಂಗಬಾದ್‌: ‘ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ಉರಿಯುತ್ತಿರುವ ಬೆಂಕಿಗೆ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಇನ್ನಷ್ಟು ತುಪ್ಪ ಸುರಿಯುತ್ತಿದೆ’ ಎಂದು ವಿದ್ಯಾರ್ಥಿ ಸಂಘಟನೆಯ ಮಾಜಿ ನಾಯಕ ಕನ್ಹಯ್ಯ ಕುಮಾರ್ ಟೀಕಿಸಿದರು.

ಮಹಾರಾಷ್ಟ್ರದ ಪತೇರಿಯಲ್ಲಿ ನಡೆದ ಸಿಎಎ ವಿರೋಧಿ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಮೋದಿ ಮತ್ತು ಅಮಿತ್‌ ಶಾ ಗುಜರಾತ್‌ ಚುನಾವಣೆ ಸಂದರ್ಭದಲ್ಲಿ  ಹಿಂದೂ, ಮುಸ್ಲಿಮರ ನಡುವೆ ಸಂಘರ್ಷ ಸೃಷ್ಟಿಸುತ್ತಿದ್ದರು. ಈಗ ದೇಶದ ವಿಷಯದಲ್ಲೂ ಆ ತಂತ್ರವನ್ನು ಅಳವಡಿಸಿಕೊಂಡಿದ್ದಾರೆ’ ಎಂದು ಆರೋಪಿಸಿದರು.

‘ಜನರು ಈ ಧಾರ್ಮಿಕ ಸಂಘರ್ಷವನ್ನು ಪಕ್ಕಕ್ಕಿಟ್ಟು, ದೇಶದಲ್ಲಿನ ನಿರುದ್ಯೋಗ ಹಾಗೂ ಕುಗ್ಗಿರುವ ಆರ್ಥಿಕತೆ ಬಗ್ಗೆ ಸರ್ಕಾರವನ್ನು ಪ್ರಶ್ನಿಸಬೇಕು. ಆದರೆ, ಯಾರಾದರೂ ದೇಶದಲ್ಲಿರುವ ಸಮಸ್ಯೆಗಳ ಬಗ್ಗೆ ಸರ್ಕಾರವನ್ನು ಪ್ರಶ್ನಿಸಿದರೆ, ಪ್ರತಿಯಾಗಿ ಆತನ ಪೌರತ್ವದ ಬಗ್ಗೆ ಕೇಳಲಾಗುತ್ತಿದೆ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು