ಸೋಮವಾರ, ಫೆಬ್ರವರಿ 24, 2020
19 °C

‘ಮೋದಿ ಅನಕೊಂಡ’; ಟಿಡಿಪಿ ಮುಖಂಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಮರಾವತಿ: ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳುವುದನ್ನು ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಸ್ಪಷ್ಟಪಡಿಸುತ್ತಲೇ, ಟಿಡಿಪಿ ಮತ್ತು ಬಿಜೆಪಿ ನಡುವೆ ಆರೋಪ–ಪ್ರತ್ಯಾರೋಪ ಪ್ರಾರಂಭವಾಗಿದೆ.

‘ಸಿಬಿಐ, ಆರ್‌ಬಿಐನಂತಹ ರಾಷ್ಟ್ರೀಯ ಸಂಸ್ಥೆಗಳನ್ನು ನುಂಗುತ್ತಿರುವ ಮೋದಿ ಅನಕೊಂಡ ಇದ್ದಂತೆ’ ಎಂದು ಟಿಡಿಪಿ ಮುಖಂಡ, ಹಣಕಾಸು ಸಚಿವ ಯನಮಾಲ ರಾಮಕೃಷ್ಣುಡು ಹೇಳಿದ್ದಾರೆ. 

‘2017ರಲ್ಲಿ ನಡೆದ ಎನ್‌ಡಿಎ ಸಭೆಯಲ್ಲಿ ಮೋದಿಪ್ರಧಾನಿಯಾಗಬೇಕು ಎಂಬ ನಿರ್ಣಯ ಅಂಗೀಕರಿಸಿದ್ದ ಚಂದ್ರಬಾಬು ನಾಯ್ಡು, ಈಗ ಅವರ ವಿರುದ್ಧವೇ ಮಾತನಾಡುತ್ತಿದ್ದಾರೆ. ಅವರು ಒಂದು ರೀತಿಯಲ್ಲಿ ಭ್ರಷ್ಟಾಚಾರದ ರಾಜನಿದ್ದಂತೆ’ ಎಂದು ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಕನ್ನಾ ಲಕ್ಷ್ಮಿನಾರಾಯಣ ಆರೋಪಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು