ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

26ಕ್ಕೆ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ

Last Updated 22 ಏಪ್ರಿಲ್ 2019, 20:21 IST
ಅಕ್ಷರ ಗಾತ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಏ. 26ರಂದು ವಾರಾಣಸಿ ಲೋಕಸಭಾ ಕ್ಷೇತ್ರಕ್ಕೆ ತಮ್ಮ ನಾಮಪತ್ರವನ್ನು ಸಲ್ಲಿಸಲಿದ್ದಾರೆ.

ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಸೇರಿದಂತೆ ಪಕ್ಷದ ಅನೇಕ ಮುಖಂಡರು ಮತ್ತು ಎನ್‌ಡಿಎ ಮೈತ್ರಿಕೂಟದಲ್ಲಿರುವ ಪಕ್ಷಗಳ ಮುಖಂಡರು ಅಂದು ಅವರ ಜೊತೆ ಕಾಣಿಸಿಕೊಳ್ಳುವ ನಿರೀಕ್ಷೆ ಇದೆ.

‘ನಾಮಪತ್ರ ಸಲ್ಲಿಕೆಯ ಮುನ್ನಾದಿನವಾದ ಏ. 25ರಂದು ವಾರಾಣಸಿಯಲ್ಲಿ ಭವ್ಯವಾದ ರೋಡ್‌ ಶೋ ಆಯೋಜಿಸಲಾಗುವುದು. ಬಿಹಾರದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಹಾಗೂ ಪಕ್ಷದ ಇತರ ಹಿರಿಯ ಮುಖಂಡರು, ಕಾರ್ಯಕರ್ತರು ಅದರಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಮೇ19ರಂದು ಈ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT