ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಆರ್‌ಪಿಎಫ್ ಸಿಬ್ಬಂದಿ ಕುಟುಂಬದ ಕಾಳಜಿಗೆ ಕೇಂದ್ರ ಬದ್ಧ: ಅಮಿತ್ ಶಾ

Last Updated 29 ಡಿಸೆಂಬರ್ 2019, 22:05 IST
ಅಕ್ಷರ ಗಾತ್ರ

ನವದೆಹಲಿ: ‘ದೇಶ ಕಾಯುವ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಿಬ್ಬಂದಿಯ ಕುಟುಂಬದವರ ಕಾಳಜಿ ವಹಿಸಲು ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಬದ್ಧವಿದೆ’ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಹೇಳಿದ್ದಾರೆ.

ಸಿಆರ್‌ಪಿಎಫ್‌ ನೂತನ ಕೇಂದ್ರ ಕಚೇರಿ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ ಭಾನುವಾರ ಮಾತನಾಡಿದ ಅವರು, ‘ಅರೆಸೇನಾಪಡೆಯ ಎಲ್ಲಾ ಸಿಬ್ಬಂದಿ, ತಮ್ಮ ಕುಟುಂಬದ ಜತೆ ಕನಿಷ್ಠ 100 ದಿನಗಳನ್ನು ಕಳೆಯುವಂತೆ ನೋಡಿಕೊಳ್ಳಲು ಶ್ರಮಿಸಲಾಗುತ್ತಿದೆ. ಇವರ ಕುಟುಂಬದವರಿಗೆ ಆರೋಗ್ಯ ಕಾರ್ಡ್‌ ಸೌಲಭ್ಯ ನೀಡಲಾಗುತ್ತದೆ’ ಎಂದರು.

3 ಲಕ್ಷಕ್ಕೂ ಹೆಚ್ಚು ಸಿಬ್ಬಂದಿ ಹೊಂದಿರುವ ಸಿಆರ್‌ಪಿಎಫ್, ನಕ್ಸಲ್ ನಿಗ್ರಹ ಕಾರ್ಯಾಚರಣೆಗಳಷ್ಟೆ ಅಲ್ಲದೆ ದೇಶದ ಆಂತರಿಕ ರಕ್ಷಣೆಯ ಪ್ರಮುಖ ಹೊಣೆ ಹೊತ್ತಿದೆ. ಪ್ರಸ್ತುತ, ಲೋಧಿ ರಸ್ತೆಯಲ್ಲಿರುವ ಕೇಂದ್ರ ಸರ್ಕಾರಿ ಕಚೇರಿಗಳ (ಸಿಜಿಒ) ಸಂಕೀರ್ಣದಲ್ಲಿರುವ ಬ್ಲಾಕ್‌ 1ರಲ್ಲಿ ಸಿಆರ್‌ಪಿಎಫ್ ಕೇಂದ್ರ ಕಚೇರಿ ಕಾರ್ಯನಿರ್ವಹಿಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT