ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರುಣ್ ಜೇಟ್ಲಿ ನಿವಾಸಕ್ಕೆ ಪ್ರಧಾನಿ ಮೋದಿ ಭೇಟಿ: ಕುಟುಂಬದವರಿಗೆ ಸಾಂತ್ವನ

ಸಚಿವ ಅಮಿತ್ ಶಾ ಸಾಥ್
Last Updated 27 ಆಗಸ್ಟ್ 2019, 6:47 IST
ಅಕ್ಷರ ಗಾತ್ರ

ನವದೆಹಲಿ: ಇತ್ತೀಚೆಗೆ ನಿಧನರಾದ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರ ನಿವಾಸಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಕಳೆದ ಶನಿವಾರ ಅರುಣ್ ಜೇಟ್ಲಿ ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದರು. ಈ ವೇಳೆ ಪ್ರಧಾನಿ ಮೋದಿ ವಿದೇಶ ಪ್ರವಾಸದಲ್ಲಿದ್ದರು. ಜಿ–7 ಶೃಂಗಸಭೆ ಸೇರಿದಂತೆ ಫ್ರಾನ್ಸ್, ಬಹರೇನ್ ಮತ್ತು ಯುಎಇ ದೇಶಗಳಿಗೆ ಭೇಟಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅರುಣ್ ಜೇಟ್ಲಿ ಅವರ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿರಲಿಲ್ಲ. ಪ್ರಧಾನಿ ಮೋದಿ ಸೋಮವಾರ ವಿದೇಶ ಪ್ರವಾಸ ಮುಗಿಸಿ ಭಾರತಕ್ಕೆ ವಾಪಸಾಗಿದ್ದಾರೆ.

ಮಂಗಳವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಜೇಟ್ಲಿ ನಿವಾಸಕ್ಕೆ ಭೇಟಿ ನೀಡಿದ ಮೋದಿ ಅವರ ಕುಟುಂಬ ವರ್ಗದವರೊಂದಿಗೆ ಮಾತನಾಡಿ ಸಾಂತ್ವ ಹೇಳಿದರು. ಈ ವೇಳೆ ಜೇಟ್ಲಿ ಅವರ ಪತ್ನಿ, ಪುತ್ರಿ ಹಾಗೂ ಕುಟುಂಬ ಸದಸ್ಯರು ಇದ್ದರು.

ಪ್ರಧಾನಿ ಅವರ ಜೊತೆಯಲ್ಲಿ ಗೃಹಸಚಿವ ಅಮಿತ್ ಶಾ ಕೂಡ ಇದ್ದರು.ಜೇಟ್ಲಿ ಪುತ್ರ ರೋಹನ್ ಜೊತೆ ಮೋದಿ ಅರ್ಧ ಗಂಟೆಗಳ ಕಾಲ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT