ಗುರುವಾರ , ಜೂಲೈ 2, 2020
28 °C

ಮೋದಿ ಹೆಸರಲ್ಲಿ ಮಂತ್ರವಿದೆ: ಶಿವರಾಜ್ ಸಿಂಗ್‌ ಚೌಹಾಣ್‌ 

ಎಎನ್ಐ Updated:

ಅಕ್ಷರ ಗಾತ್ರ : | |

ಭೋಪಾಲ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹೆಸರಲ್ಲಿ ಮಂತ್ರವಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಹೇಳಿದ್ದಾರೆ. 

ಮೋದಿ ಎಂಬ ಪದದ ಪ್ರತಿ ಅಕ್ಷರಗಳಿಗೂ ಅವರು ಒಂದೊಂದು ವಿವರಣೆ ನೀಡಿದ್ದಾರೆ. 

‘ಮೋದಿ (MODI) ಹೆಸರಲ್ಲಿ ‘ಎಂ’ ಅಕ್ಷರವು ಪ್ರೇರಣಾದಾಯಕ (Motivational) ಆಗಿದ್ದು, ಭಾರತವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ಮೋದಿ ಅವರು ಶ್ರಮಿಸುತ್ತಿದ್ದಾರೆ. ಇದು ನಮಗೆ ಪ್ರೇರಣಾದಾಯಕವಾಗಿದೆ. ‘ಒ’ ಅವಕಾಶ (Opportunity) ಆಗಿದ್ದು,  ಅವರು ರಾಷ್ಟ್ರದ ಸುಪ್ತ ಅವಕಾಶಗಳನ್ನು ಹೊರತರುವಲ್ಲಿ ಕೆಲಸ ಮಾಡುತ್ತಿದ್ದಾರೆ. ‘ಡಿ’ ಅಕ್ಷರವು ಪ್ರಬಲ ನಾಯಕತ್ವವನ್ನು (Dynamic Leadership) ಸೂಚಿಸುತ್ತಿದೆ. ‘ಐ’ ಸ್ಫೂರ್ತಿಯನ್ನು(Inspire) ಅನ್ನು ಸೂಚಿಸುತ್ತದೆ. ಭಾರತವನ್ನು ಸ್ವಾವಲಂಬಿ ದೇಶವನ್ನಾಗಿ ಮಾಡುವತ್ತ ಅವರ ಪ್ರಯತ್ನಗಳು ನಮಗೆ ಸ್ಫೂರ್ತಿದಾಯಕವಾಗಿದೆ,’ ಎಂದು ಅವರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಬಿಜೆಪಿ 2.0 ಸರ್ಕಾರಕ್ಕೆ ಒಂದು ವರ್ಷ: ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಪತ್ರ

ನರೇಂದ್ರ ಮೋದಿ ಅವರ ನೇತೃತ್ವದ ಎರಡನೇ ಅವಧಿಯ ಕೇಂದ್ರ ಸರ್ಕಾರ ಇಂದು (ಮೇ. 30) ಒಂದು ವರ್ಷ ಪೂರ್ಣಗೊಳಿಸಿದ್ದು, ಇದೇ ಸಂದರ್ಭದಲ್ಲಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ತಮ್ಮ ಅಭಿಪ್ರಾಯವನ್ನು ಹೀಗೆ ವ್ಯಕ್ತಪಡಿಸಿದ್ದಾರೆ.  

ಇದನ್ನೂ ಓದಿ: 

ಎರಡನೇ ಅವಧಿಗೆ ಕೇಂದ್ರದಲ್ಲಿ ಅಧಿಕಾರಕ್ಕೇರಿ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ದೇಶದ ಜನರನ್ನು ಉದ್ದೇಶಿಸಿ ಪತ್ರ ಬರೆದಿರುವ ನರೇಂದ್ರ ಮೋದಿ ಅವರು, ಸರ್ಕಾರ ಜಾರಿಗೆ ತಂದ ಯೋಜನೆಗಳು, ಸಾಧನೆಗಳು, ಪ್ರಮುಖ ನಿರ್ಧಾರಗಳು, ಕೊರೊನಾ ವೈರಸ್ ಸಾಂಕ್ರಾಮಿಕದ ವಿರುದ್ಧದ ಹೋರಾಟ ಇತ್ಯಾದಿ ವಿಚಾರಗಳನ್ನು ಅದರಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: 

ಜನರ ವಾತ್ಸಲ್ಯವು ಹೊಸ ಶಕ್ತಿ ನೀಡಿದೆ ಎಂದೂ ಮೋದಿ ತಮ್ಮ ಪತ್ರದಲ್ಲಿ ಹೇಳಿಕೊಂಡಿದ್ದಾರೆ. ‘ಮತ್ತೊಮ್ಮೆ ನಾನು ದೇಶದ 130 ಕೋಟಿ ಜನರಿಗೆ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ನಮಿಸುತ್ತೇನೆ. ಸಾಮಾನ್ಯ ದಿನಗಳಲ್ಲಾದರೆ ನಾನು ನಿಮ್ಮ ನಡುವೆ ಇರುತ್ತಿದ್ದೆ. ಆದರೆ ಸದ್ಯದ ಪರಿಸ್ಥಿತಿ ಅದಕ್ಕೆ ಅವಕಾಶ ನೀಡುತ್ತಿಲ್ಲ. ಹೀಗಾಗಿ ಪತ್ರದ ಮೂಲಕ ನಿಮ್ಮ ಆಶೀರ್ವಾದ ಕೋರುತ್ತಿದ್ದೇನೆ’ ಎಂದು ಮೋದಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು