ಬುಧವಾರ, ಸೆಪ್ಟೆಂಬರ್ 22, 2021
24 °C

ಮೋದಿ–ಪ್ರಿಯಾಂಕಾ ಪ್ರಚಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ರಾಷ್ಟ್ರ ರಾಜಧಾನಿಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ಬುಧವಾರ ಪ್ರಚಾರ ನಡೆಸಲಿದ್ದಾರೆ.

ಎರಡು ರೋಡ್‌ ಷೋದಲ್ಲಿ ಭಾಗವಹಿಸುವ ಪ್ರಿಯಾಂಕಾ ಗಾಂಧಿ ಅವರು ಪಕ್ಷದ ಅಭ್ಯರ್ಥಿಗಳಾದ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್‌, ಬಾಕ್ಸರ್ ಆಗಿದ್ದ ವಿಜೇಂದರ್‌ ಸಿಂಗ್‌ ಪರ ಪ್ರಚಾರ ನಡೆಸುವರು.

ರಾಜಧಾನಿಯ ಸೀಲಾಂಪುರ್, ಘೋಂಡಾ, ಬಾಬರ್‌ಪುರ್‌ ವಿಧಾನಸಭೆ  ಕ್ಷೇತ್ರಗಳ ವ್ಯಾಪ್ತಿಯಲ್ಲಿ ರೋಡ್‌ ಷೋ ನಡೆಯಲಿದೆ. ತುರ್ತು ಪರಿಸ್ಥಿತಿ ದಿನಗಳ ಹಿಂಸಾಚಾರದಿಂದ ಸ್ಥಳಾಂತರಗೊಂಡವರು ಸೀಲಾಂಪುರ್‌ನಲ್ಲಿ ನೆಲೆಸಿದ್ದಾರೆ.

ಇದೇ ದಿನ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಮ್‌ಲೀಲಾ ಮೈದಾನದಲ್ಲಿ ಪಕ್ಷದ ಚುನಾವಣಾ ಪ್ರಚಾರ ಭಾಷಣ ಮಾಡಲಿದ್ದು, ರಾಜಧಾನಿಯ ಎಲ್ಲ ಏಳು ಕ್ಷೇತ್ರಗಳ ಪಕ್ಷದ ಅಭ್ಯರ್ಥಿಗಳ ಪರ ಮತಯಾಚಿಸುವರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು