ಶನಿವಾರ, ಫೆಬ್ರವರಿ 29, 2020
19 °C

ನೌಕರಿ ಪರ್‌ ಚರ್ಚಾ ನಡೆಸಿ: ಸೀತಾರಾಂ ಯೆಚೂರಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆ ಕುರಿತು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ, ಪ್ರಧಾನಿ ನರೇಂದ್ರ ಮೋದಿ ಅವರು ‘ನೌಕರಿ ಪರ್‌ ಚರ್ಚಾ’ ನಡೆಸಬೇಕು ಎಂದು ವ್ಯಂಗ್ಯವಾಡಿದ್ದಾರೆ.

‘ನೋಟು ರದ್ದು ಮತ್ತು ಜಿಎಸ್‌ಟಿಯಂತಹ ಕೆಟ್ಟ ಯೋಜನೆಗಳ ಮೂಲಕ ನಿರುದ್ಯೋಗ ಸಮಸ್ಯೆಗೆ ಕಾರಣವಾಗಿರುವ ಮೋದಿ, ‘ನೌಕರಿ ಪರ್‌ ಚರ್ಚಾ’ ನಡೆಸುವ ಮೂಲಕ ಲಕ್ಷಾಂತರ ನಿರುದ್ಯೋಗಿಗಳ ‘ಮನ್‌ ಕಿ ಬಾತ್‌’ ಆಲಿಸಬೇಕು’ ಎಂದು ಟ್ವೀಟ್‌ ಮಾಡಿದ್ದಾರೆ.

‘ಸ್ವಾತಂತ್ರ್ಯ ನಂತರದ ದೇಶದಲ್ಲಿ ಮೊದಲ ಬಾರಿ ನಿರುದ್ಯೋಗ ಪ್ರಮಾಣ ಅತಿ ಹೆಚ್ಚಾಗಿದೆ. 15ರಿಂದ 19 ವಯೋಮಾನದ ಶೇ 45 ಮಂದಿ, 20ರಿಂದ 24 ವಯೋಮಾನದ ಶೇ 37 ಮಂದಿ ನಿರುದ್ಯೋಗಿಗಳಾಗಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು