ಶನಿವಾರ, ಆಗಸ್ಟ್ 15, 2020
21 °C

ಮೋದಿ ಜೊತೆ ವೇದಿಕೆ ಹಂಚಿಕೊಳ್ಳುವ ಉದ್ಧವ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಾತೂರ್‌: ಸುಮಾರು ನಾಲ್ಕು ವರ್ಷಗಳ ಬಳಿಕ ಪ್ರಧಾನಿ ನರೇಂದ್ರ ಮೋದಿ ಮತ್ತು ಶಿವಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ ಅವರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಲಾತೂರ್‌ನ ಔಸಾದಲ್ಲಿ ಮಂಗಳವಾರ ನಡೆಯಲಿರುವ ಚುನಾವಣಾ ರ್‍ಯಾಲಿಯಲ್ಲಿ ಮೋದಿ, ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡಣವಿಸ್‌ ಹಾಗೂ ಉದ್ಧವ್‌ ಠಾಕ್ರೆ ಪಾಲ್ಗೊಳ್ಳಲಿದ್ದಾರೆ. ಅರಬೀ ಸಮುದ್ರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಛತ್ರಪತಿ ಶಿವಾಜಿ ಸ್ಮಾರಕದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ (2016ರ ಡಿಸೆಂಬರ್‌) ಮೋದಿ ಹಾಗೂ ಉದ್ಧವ್‌ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದರು.

ಅದಾದ ಬಳಿಕ ಬಿಜೆಪಿ– ಶಿವಸೇನಾ ನಡುವೆ ಅಸಮಾಧಾನ ಕಾಣಿಸಿಕೊಂಡು, ಮೋದಿ ಹಾಗೂ ಅಮಿತ್‌ ಶಾ ಅವರನ್ನು ಶಿವಸೇನೆ ತೀವ್ರ ಟೀಕೆಗೆ ಒಳಪಡಿಸಿತ್ತು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಎರಡು ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದು ಮಹಾರಾಷ್ಟ್ರದಲ್ಲಿ ಬಿಜೆಪಿ 25 ಕ್ಷೇತ್ರಗಳಲ್ಲಿ ಮತ್ತು ಶಿವಸೇನಾ 23 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು