ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋನಿಯಾ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಮೋದಿ

Last Updated 9 ಡಿಸೆಂಬರ್ 2018, 12:07 IST
ಅಕ್ಷರ ಗಾತ್ರ

ನವದೆಹಲಿ: ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರ 72ನೇ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಶುಭಾಶಯ ಕೋರಿದ್ದಾರೆ.

‘ಸೋನಿಯಾ ಗಾಂಧಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರ ದೀರ್ಘ ಹಾಗೂ ಆರೋಗ್ಯಪೂರ್ಣ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ’ ಎಂದು ಮೋದಿ ಅವರು ಟ್ವೀಟ್‌ ಮಾಡಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ಸೋನಿಯಾ ಗಾಂಧಿ ಅವರಿಗೆ ಶುಭಾಶಯ ಕೋರಿದ್ದಾರೆ.

ಮಮತಾ ಅವರು ಸೋನಿಯಾ ಗಾಂಧಿ ಅವರನ್ನು ಶೀಘ್ರ ಭೇಟಿಯಾಗಲಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್‌ನ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT