ಭಾನುವಾರ, ಜೂನ್ 20, 2021
28 °C
‘ಧ್ಯಾನ ಗುಹೆ’ಗೆ ಹೆಚ್ಚಿದ ಬೇಡಿಕೆ

ಕೇದಾರನಾಥ: ಮೋದಿ ಧ್ಯಾನ ಮಾಡಿದ ಗುಹೆಯೀಗ ಪ್ರವಾಸಿ ತಾಣ

ಪಿಟಿಐ Updated:

ಅಕ್ಷರ ಗಾತ್ರ : | |

ಡೆಹ್ರಾಡೂನ್‌: ಉತ್ತರಾಖಂಡದ ಧಾರ್ಮಿಕ ಯಾತ್ರಾಸ್ಥಳ ಕೇದಾರನಾಥ ದೇವಾಲಯ ಬಳಿಯ ಗುಹೆಯೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ಯಾನ ಮಾಡಿದ ಬಳಿಕ ಈ ಗುಹೆಯಲ್ಲಿ ಧ್ಯಾನ ಮಾಡಲು ಆಸಕ್ತಿ ತೋರುವವರ ಸಂಖ್ಯೆ ಹೆಚ್ಚಾಗಿದೆ.

ಇದಕ್ಕಾಗಿ ‘ಗರ್ವಾಲ್‌ ಮಂಡಲ್‌ ವಿಕಾಸ್‌ ನಿಗಮ್‌ ಲಿಮಿಟೆಡ್‌‘ (ಜಿಎಂವಿಎನ್‌) ವೆಬ್‌ಸೈಟ್‌ನಲ್ಲಿ ಆನ್‌ಲೈನ್‌ ಮೂಲಕ ಕಾಯ್ದಿರಿಸುವವರು ಹೆಚ್ಚಾಗಿದ್ದಾರೆ.

ಈಗಾಗಲೇ ಜುಲೈ ತಿಂಗಳ ಪೂರ್ತಿ ‘ಧ್ಯಾನಗುಹೆ‘ ಬುಕಿಂಗ್‌ ಆಗಿದ್ದು, ಆಗಸ್ಟ್‌, ಸೆಪ್ಟೆಂಬರ್‌ ಮತ್ತು ಅಕ್ಟೋಬರ್‌ನ ಕೆಲ ದಿನಾಂಕಗಳು ಮುಂಗಡ ಬುಕ್‌ ಆಗಿವೆ ಎಂದು ಜಿಎಂವಿಎನ್‌ ಪ್ರಧಾನ ವ್ಯವಸ್ಥಾಪಕ ಬಿ.ಎಲ್‌.ರಾಣಾ ತಿಳಿಸಿದ್ದಾರೆ.

‘ಮೇ ತಿಂಗಳಲ್ಲಿ ಪ್ರಧಾನಿ ಮೋದಿ ಅವರು ಈ ಗುಹೆಯಲ್ಲಿ ಧ್ಯಾನ ಮಾಡಿದ ಬಳಿಕ ಒಂದು ದಿನವೂ ಈ ಗುಹೆ ಖಾಲಿ ಇಲ್ಲ‘ ಎಂದು ಅವರು ಮಾಹಿತಿ ನೀಡಿದ್ದಾರೆ.

‘ಹಿಮಾಲಯದಲ್ಲಿ ಸುಮಾರು 12,500 ಅಡಿ ಎತ್ತರದಲ್ಲಿರುವ ಈ ಪ್ರದೇಶದ ಸುತ್ತಮುತ್ತ ಇನ್ನೂ ಮೂರು ಧ್ಯಾನ ಗುಹೆಗಳನ್ನು ನಿರ್ಮಿಸಲು ಯೋಜಿಸಲಾಗಿದೆ. ಅದರಲ್ಲಿ ಒಂದರ ನಿರ್ಮಾಣ ಕಾರ್ಯ ಆರಂಭವಾಗಿದ್ದು, ಇನ್ನೆರಡು ಗುಹೆಗಳಿಗೆ ಜಾಗವನ್ನು ಅಂತಿಮಗೊಳಿಸಬೇಕಿದೆ‘ ಎಂದು ರುದ್ರಪ್ರಯಾಗ್‌ನ ಜಿಲ್ಲಾಧಿಕಾರಿ ಮಂಗೇಶ್ ಘಿಲ್ಡಿಯಾಲ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಈ ‘ಗುಹೆ‘ಯಲ್ಲಿ ಧ್ಯಾನಕ್ಕೆ ವರ್ಷದ ಹಿಂದೆಯಷ್ಟೇ ವ್ಯವಸ್ಥೆ ಕಲ್ಪಿಸಲಾಗಿತ್ತು. ಆದರೆ ಪ್ರಧಾನಿ ಭೇಟಿ ನಂತರ ಇಲ್ಲಿಗೆ ಬರಲು ಆಸಕ್ತಿ ತೋರುವವರ ಹೆಚ್ಚಾಗಿದೆ ಎನ್ನುತ್ತಾರೆ ಅವರು.

ಮೋದಿ ಅವರು ಈ ಗುಹೆಯಲ್ಲಿ ಧ್ಯಾನಕ್ಕೆ ಕುಳಿತ ಫೋಟೊಗಳು ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್‌ ಆಗಿದ್ದವು. ನಂತರ ಈ ಗುಹೆ ಪ್ರವಾಸಿಗರನ್ನು ಸೆಳೆಯುತ್ತಿದೆ ಎಂದು ಅವರು ವಿವರಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು