ಮಂಗಳವಾರ, ಏಪ್ರಿಲ್ 7, 2020
19 °C

ಹಣ ಅಕ್ರಮ ವರ್ಗಾವಣೆ: ಜಾರ್ಖಂಡ್‌ನ ಮಾಜಿ ಸಚಿವ ಎಕ್ಕಾ ದೋಷಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ/ರಾಂಚಿ (ಪಿಟಿಐ): ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರ್ಖಂಡ್‌ನ ಮಾಜಿ ಸಚಿವ ಅನೋಶ್‌ ಎಕ್ಕಾ ತಪ್ಪಿತಸ್ಥ ಎಂದು ಜಾರ್ಖಂಡ್ ಕೋರ್ಟ್‌ ಶನಿವಾರ ತೀರ್ಪು ನೀಡಿದೆ.

ಶಿಕ್ಷೆಯ ಪ್ರಮಾಣವನ್ನು ಮಾರ್ಚ್‌ 31ರಂದು ಪ್ರಕಟಿಸಲಾಗುವುದು ಎಂದು ಕೋರ್ಟ್‌ ಹೇಳಿದೆ. ಮಾಜಿ ಮುಖ್ಯಮಂತ್ರಿ ಹಾಗೂ ಇತರರ ವಿರುದ್ಧ ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಎಕ್ಕಾ ಸಹ ಆರೋಪಿಯಾಗಿದ್ದರು. ಈ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾದವರ ಪೈಕಿ ಇವರು 11ನೆಯವರು.

ಕೋಡಾ ಸಂಪುಟದಲ್ಲಿ ಎಕ್ಕಾ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದರು. 2009ರಲ್ಲಿ ಹಗರಣ ಪತ್ತೆ ಹಚ್ಚಿ, ತನಿಖೆ ಆರಂಭಿಸಿದ ಜಾರಿ ನಿರ್ದೇಶನಾಲಯ (ಇ.ಡಿ), ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿತು. 2014ರಲ್ಲಿ ಎಕ್ಕಾಗೆ ಸೇರಿದ ₹ 100 ಕೋಟಿ ಮೌಲ್ಯದ ಆಸ್ತಿಯನ್ನು ಇ.ಡಿ ಮುಟ್ಟುಗೋಲು ಹಾಕಿಕೊಂಡಿತು. ಎಕ್ಕಾ ತಮ್ಮ ಆದಾಯಕ್ಕೂ ಮೀರಿದ ₹ 17 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದನ್ನು ಸಿಬಿಐ ಪತ್ತೆ ಹಚ್ಚಿತ್ತು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು