ಗುರುವಾರ , ಜುಲೈ 16, 2020
22 °C

ಜೂನ್‌ 1ಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಮೇಲ್ಮೈ ಸುಳಿಗಾಳಿ ಪ್ರಭಾವದಿಂದಾಗಿ ಜೂನ್‌ 1ರಂದೇ ಕೇರಳಕ್ಕೆ ನೈರುತ್ಯ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗುರುವಾರ ತಿಳಿಸಿದೆ. 

ಜೂನ್‌ 5ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಐಎಂಡಿ ಮೇ 15ರಂದು ತಿಳಿಸಿತ್ತು. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪ್ರಭಾವದಿಂದಾಗಿ ಮುಂಗಾರು ಮಾರುತಗಳು ಚುರುಕಾಗಿವೆ ಎಂದು ಐಎಂಡಿ ತಿಳಿಸಿದೆ. 

‘ಅರಬ್ಬಿ ಸಮುದ್ರದಲ್ಲಿ ಮೇ 31ರಿಂದ ಜೂನ್‌ 4ರವರೆಗೆ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗಲಿದ್ದು, ಇದು ನೈರುತ್ಯ ಮುಂಗಾರು ಮಾರುತಗಳ ಪ್ರವೇಶಕ್ಕೆ ಅನುಕೂಲಕರ ವಾತಾವರಣ ಕಲ್ಪಿಸಲಿದೆ. ಈ ವರ್ಷ ಮುಂಗಾರಿನಲ್ಲಿ ವಾಡಿಕೆ ಮಳೆಯಾಗಲಿದೆ’ ಎಂದು ಇಲಾಖೆ ಮಾಹಿತಿ ನೀಡಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು