ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಡಿಯೊ ಕಾನ್ಫರೆನ್ಸ್ ಮೂಲಕ ಉತ್ತರ ಪ್ರದೇಶ ವಿಧಾನಸಭೆ ಅಧಿವೇಶನ?

Last Updated 28 ಜೂನ್ 2020, 8:41 IST
ಅಕ್ಷರ ಗಾತ್ರ

ಲಖನೌ: ಉತ್ತರ ಪ್ರದೇಶ ವಿಧಾನಸಭೆಯ ಮುಂಗಾರು ಆಧಿವೇಶನವನ್ನು ಆಗಸ್ಟ್‌ನಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ನಡೆಸುವ ಸಾಧ್ಯತೆಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಸ್ಪೀಕರ್ ನಾರಾಯಣ ದೀಕ್ಷಿತ್ ಭಾನುವಾರ ತಿಳಿಸಿದರು.

ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಜೊತೆಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ವಿಡಿಯೊ ಕಾನ್ಪರೆನ್ಸ್ ಸೇರಿದಂತೆ ಅಧಿವೇಶನ ನಡೆಸಲು ಇರುವ ಎಲ್ಲ ಸಾಧ್ಯತೆಗಳನ್ನು ಪರಿಶೀಲಿಸಲಾಗುತ್ತಿದೆ ಎಂದರು.

ಉಳಿದಂತೆ, ಸಾಕಷ್ಟು ಆಸನ ವ್ಯವಸ್ಥೆ ಇರುವ ಲೋಕಭವನದಲ್ಲಿ ಅಧಿವೇಶನ ಆಯೋಜಿಸುವುದು, ವಿಧಾನಸಭೆಯ ಕೆಲವು ಆಸನಗಳನ್ನು ತೆಗೆಸಿ ಪರಸ್ಪರ ಅಂತರ ಕಾಯ್ದುಕೊಳ್ಳಲು ಒತ್ತು ನೀಡುವ ಆಯ್ಕೆಗಳೂ ಮುಕ್ತವಾಗಿವೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT