‘ಮೋಸ್ಟ್‌ ವಾಂಟೆಡ್‌’ ಉಗ್ರರ ಪಟ್ಟಿ ಸಿದ್ಧ

ಗುರುವಾರ , ಜೂನ್ 20, 2019
30 °C

‘ಮೋಸ್ಟ್‌ ವಾಂಟೆಡ್‌’ ಉಗ್ರರ ಪಟ್ಟಿ ಸಿದ್ಧ

Published:
Updated:

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ‘ಮೋಸ್ಟ್ ವಾಂಟೆಡ್‌ 10 ಉಗ್ರರ ಪಟ್ಟಿ’ಯನ್ನು ಭದ್ರತಾ ಪಡೆಗಳು ಸಿದ್ಧಪಡಿಸಿವೆ.

ಇವರಲ್ಲಿ ಹಿಜ್ಬುಲ್ ಮುಜಾಹಿದ್ದಿನ್‌ನ ಹಿರಿಯ ಕಮಾಂಡರ್ ರಿಯಾಜ್‌ ಅಹಮದ್ ನೈಕೊ ಸಹ ಸೇರಿದ್ದಾನೆ. ಈತನ ಸೆರೆ ಹಿಡಿಯಲು ಇಲ್ಲವೇ ಹತ್ಯೆ ಮಾಡಲು ಕಾರ್ಯಾಚರಣೆ ಆರಂಭಿಸಲಾಗುವುದು ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಬೇಹುಗಾರಿಕಾ ಏಜೆನ್ಸಿಗಳು, ಅರೆಸೇನಾ ಪಡೆಗಳು, ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಮಾಹಿತಿ ಆಧರಿಸಿ ಈ ಪಟ್ಟಿ ಬಿಡುಗಡೆ ಮಾಡಲಾಗಿದೆ. 

ಸರಣಿ ವಿದ್ವಂಸಕ ಕೃತ್ಯ ನಡೆಸಿರುವ ನೈಕೊ, ಭದ್ರತಾ ಪಡೆಗಳು ಮತ್ತು ನಾಗರಿಕರ ಸಾವಿಗೆ ಕಾರಣವಾಗಿದ್ದಾನೆ. ಆದ್ದರಿಂದ ಈತ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದ್ದಾನೆ.

ಕಾಶ್ಮೀರದಲ್ಲಿ ನಡೆದ ಹಲವು ದಾಳಿಗಳಲ್ಲಿ ಭಾಗಿಯಾದ ಇತರ ಉಗ್ರರ ಹೆಸರು ಪಟ್ಟಿಯಲ್ಲಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 3

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !