ಮಂಗಳವಾರ, ಜೂಲೈ 7, 2020
28 °C

ಮಧ್ಯಪ್ರದೇಶದಲ್ಲಿ ‘ಕಿಲ್‌ ಕೊರೊನಾ’: ಮನೆ–ಮನೆಗೆ ತೆರಳಿ ಆರೋಗ್ಯ ಸಮೀಕ್ಷೆ

ಪಿಟಿಐ Updated:

ಅಕ್ಷರ ಗಾತ್ರ : | |

ಭೋಪಾಲ್: ಕೊರೊನಾ ಸೋಂಕು ವ್ಯಾಪಿಸುತ್ತಿರುವುದನ್ನು ನಿಯಂತ್ರಿಸಲು ಮಧ್ಯಪ್ರದೇಶ ಸರ್ಕಾರವು ಜುಲೈ 1ರಂದು ‘ಕಿಲ್‌ ಕೊರೊನಾ’ ಅಭಿಯಾನಕ್ಕೆ ಚಾಲನೆ ನೀಡಲಿದೆ.  

ಈ ಅಭಿಯಾನದಲ್ಲಿ ಮನೆ ಮನೆಗೆ ತೆರಳಿ ಆರೋಗ್ಯ ಸಮೀಕ್ಷೆ ನಡೆಸಲಾಗುತ್ತದೆ. ಈ ವೇಳೆ ಆರೋಗ್ಯ ತಪಾಸಣೆಯೂ ನಡೆಯಲಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಶನಿವಾರ ನಡೆಸಿದ ಆನ್‌ಲೈನ್‌ ಸಭೆಯಲ್ಲಿ ತಿಳಿಸಿದ್ದಾರೆ.

15 ದಿನಗಳ ಈ ಅಭಿಯಾನದಲ್ಲಿ 2.5 ಲಕ್ಷ ಪರೀಕ್ಷೆಗಳು ನಡೆಸಲು ಉದ್ದೇಶಿಸಲಾಗಿದೆ, ನಿತ್ಯ 15 ಸಾವಿರದಿಂದ 20 ಸಾವಿರ ಜನರಿಂದ ಮಾದರಿಗಳನ್ನು ಸಂಗ್ರಹಿಸಲಾಗುವುದು ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

‘ಪ್ರಸ್ತುತ ರಾಜ್ಯದಲ್ಲಿ 10 ಲಕ್ಷ ಜನರಲ್ಲಿ 4 ಸಾವಿರ ಜನರನ್ನು ಪರೀಕ್ಷೆಗೊಳಪಡಿಸಲಾಗುತ್ತಿದ್ದು, ಈ ಪರೀಕ್ಷಾ ಸಾಮರ್ಥ್ಯವನ್ನು ದುಪ್ಪಟ್ಟುಗೊಳಿಸಲಾಗುವುದು’ ಎಂದು ಮುಖ್ಯಮಂತ್ರಿ ತಿಳಿಸಿದರು.

ಮಧ್ಯ ಪ್ರದೇಶದಲ್ಲಿ ಕೋವಿಡ್‌ನಿಂದ ಗುಣಮುಖ ಆಗುತ್ತಿರುವವರ ಪ್ರಮಾಣ ಶೇ 76.9 ರಷ್ಟಿದೆ. ಇಲ್ಲಿ ಕೋವಿಡ್‌ ಬೆಳವಣಿಗೆಯ ದರ ಶೇ 1.44 ರಷ್ಟಿದೆ. ರಾಷ್ಟ್ರಮಟ್ಟದಲ್ಲಿ ಕೋವಿಡ್‌ನಿಂದ ಗುಣಮುಖರಾಗುತ್ತಿರುವವರ ಪ್ರಮಾಣ ಶೇ 58.1ರಷ್ಟಿದ್ದರೆ, ಕೋವಿಡ್‌ ಬೆಳವಣಿಗೆಯ ದರ ಶೇ 3.69ರಷ್ಟಿದೆ ಎಂದು ಚೌಹಾಣ್‌ ಮಾಹಿತಿ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು