ಬುಧವಾರ, ಜೂನ್ 23, 2021
30 °C

ಮಧ್ಯಪ್ರದೇಶ: ವಲಸೆ ಕಾರ್ಮಿಕರಿಗೆ ಆಯೋಗ ರಚನೆ

ಪಿಟಿಐ Updated:

ಅಕ್ಷರ ಗಾತ್ರ : | |

ಶಿವರಾಜ್ ಸಿಂಗ್ ಚೌಹಾಣ್, ಮಧ್ಯಪ್ರದೇಶ ಮುಖ್ಯಮಂತ್ರಿ

ಭೋಪಾಲ್: ಲಾಕ್‌ಡೌನ್‌ ವೇಳೆ ದೇಶದ ವಿವಿಧ ನಗರಗಳಿಂದ ತಮ್ಮ ತವರಿಗೆ ಮರಳಿದ ವಲಸೆ ಕಾರ್ಮಿಕರಿಗೆ ಉದ್ಯೋಗಾವಕಾಶ ಸೃಷ್ಟಿಸುವ ನಿಟ್ಟಿನಲ್ಲಿ ಮಧ್ಯಪ್ರದೇಶ ಸರ್ಕಾರ ಆಯೋಗ ರಚಿಸಿದೆ.

ಮಧ್ಯಪ್ರದೇಶ ರಾಜ್ಯ ವಲಸೆ ಕಾರ್ಮಿಕರ ಆಯೋಗವನ್ನು(ಎಂಪಿಎಸ್‌ಎಂಎಲ್‌ಸಿ) ವಲಸೆ ಕಾರ್ಮಿಕರ ಕಲ್ಯಾಣಕ್ಕಾಗಿ ರಚಿಸಲಾಗಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್‌ ತಿಳಿಸಿದ್ದಾರೆ.

‘ಕಾರ್ಮಿಕರಿಗೆ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಸೃಷ್ಟಿಸಿ ಮಧ್ಯಪ್ರದೇಶದಲ್ಲೇ ಜೀವನೋಪಾಯ ಕಂಡುಕೊಳ್ಳುವಲ್ಲಿ ಆಯೋಗವು ನೆರವಾಗಲಿದೆ’ ಎಂದು ಅವರು ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು