ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

12 ವರ್ಷಗಳ ಹಿಂದಿನ ಕೊಲೆ ಪ್ರಕರಣ: ಪ್ರಜ್ಞಾ ಸಿಂಗ್‌ ವಿರುದ್ಧ ಮರು ತನಿಖೆ?

Last Updated 21 ಮೇ 2019, 20:04 IST
ಅಕ್ಷರ ಗಾತ್ರ

ಭೋಪಾಲ್‌: ಚುನಾವಣೋತ್ತರಮತಗಟ್ಟೆ ಸಮೀಕ್ಷೆ ಬಹಿರಂಗವಾದ ಬೆನ್ನಲ್ಲೇ, ಪ್ರಜ್ಞಾ ಸಿಂಗ್‌ ಠಾಕೂರ್‌ಗೆ ಸಂಬಂಧಿಸಿದ ಹಳೆಯ ಕೊಲೆ ಪ್ರಕರಣದ ಮರು ತನಿಖೆ ನಡೆಸಲು ಮಧ್ಯಪ್ರದೇಶ ಸರ್ಕಾರ ಮುಂದಾಗಿದೆ.

‘ಆರ್‌ಎಸ್‌ಎಸ್‌ ಪ್ರಚಾರಕ ಸುನೀಲ್‌ ಜೋಷಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಕಾನೂನು ಅಭಿಪ್ರಾಯ ಪಡೆಯಲಾಗುವುದು’ ಎಂದು ರಾಜ್ಯದ ಕಾನೂನು ಸಚಿವ ಪಿ.ಸಿ. ಶರ್ಮಾ ತಿಳಿಸಿದ್ದಾರೆ.

‘ಪ್ರಕರಣಕ್ಕೆ ಸಂಬಂಧಿಸಿದ ಸಂಪೂರ್ಣ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ. ಕಾನೂನು ಅಭಿಪ್ರಾಯ ಪಡೆದು, ನಂತರ ಹೈಕೋರ್ಟ್‌ ಮೊರೆ ಹೋಗುವ ಕುರಿತು ನಿರ್ಧಾರ ತೆಗೆದುಕೊಳ್ಳಲಿದ್ದೇವೆ’ ಎಂದು ಅವರು ಹೇಳಿದ್ದಾರೆ.

‘ಆಗಿನ ಜಿಲ್ಲಾಧಿಕಾರಿ ಪ್ರಕರಣಕ್ಕೆ ಸಂಬಂಧಿಸಿದ್ದಂತೆ, ಕಾನೂನಿನ ಅಭಿಪ್ರಾಯ ಪಡೆಯುವ ಬದಲು, ಸ್ವ ನಿರ್ಧಾರವನ್ನು ತೆಗೆದುಕೊಂಡು ಪ್ರಕರಣವನ್ನು ಮುಚ್ಚಿಹಾಕಿದರು’ ಎಂದು ಅವರು ಆರೋಪಿದ್ದಾರೆ.

ಸಂಜೋತ ಸ್ಫೋಟ ಪ್ರಕರಣದ ಆರೋಪಿ,ಸುನಿಲ್ ಜೋಷಿಯನ್ನು ದೇವಸ್ ಎಂಬಲ್ಲಿ 2007ರಂದು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಪ್ರಜ್ಞಾ ಸಿಂಗ್‌ ಸೇರಿದಂತೆ ಏಳು ಮಂದಿಯನ್ನು ಬಂಧಿಸಲಾಗಿತ್ತು.

ಸಾಕ್ಷ್ಯಗಳ ಕೊರತೆಯಿಂದ2017ರಂದು ದೇವಸ್‌ನ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು ಪ್ರಜ್ಞಾ ಸಿಂಗ್ ಸೇರಿದಂತೆ ಇತರ ಆರೋಪಿಗಳನ್ನು ಖುಲಾಸೆಗೊಳಿಸಿತ್ತು.

‘ಪ್ರಜ್ಞಾ ಬಿಜೆಪಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಪಕ್ಷದ ದಿಗ್ವಿಜಯ್‌ ಸಿಂಗ್‌ ಎದುರು ಸ್ಪರ್ಧಿಸಿರುವುದರಿಂದ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ಇದು ಪ್ರತಿಕಾರದ ರಾಜಕೀಯ’ ಎಂದು ಬಿಜೆಪಿ ವಕ್ತಾರ ರಜನೀಶ್‌ ಅಗರ್‌ವಾಲ್‌ ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT