ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮ್ಮು ಕಾಶ್ಮೀರ ಮತ್ತು ಲಡಾಕ್‌ನಲ್ಲಿ ಹೂಡಿಕೆ ಮಾಡಲಿದ್ದಾರೆ ಮುಕೇಶ್ ಅಂಬಾನಿ

Last Updated 12 ಆಗಸ್ಟ್ 2019, 12:38 IST
ಅಕ್ಷರ ಗಾತ್ರ

ನವದೆಹಲಿ: ಹೊಸ ಕೇಂದ್ರಾಡಳಿತ ಪ್ರದೇಶಗಳಾದ ಜಮ್ಮು ಮತ್ತು ಕಾಶ್ಮೀರ, ಲಡಾಕ್‌ನಲ್ಲಿರಿಲಾಯನ್ಸ್ ಗ್ರೂಪ್ ವಿಶೇಷ ಕಾರ್ಯ ಪಡೆ ರಚಿಸಲಿದ್ದು, ಇಲ್ಲಿ ಹೂಡಿಕೆ ನಡೆಸುವ ಬಗ್ಗೆ ಚಿಂತಿಸಿದೆ ಎಂದು ರಿಲಾಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಹೇಳಿದ್ದಾರೆ.

ರಿಲಾಯನ್ಸ್ ಇಂಡಸ್ಟ್ರೀಸ್‌ನ 42ನ ವಾರ್ಷಿಕ ಮಹಾ ಸಭೆಯಲ್ಲಿ ಅಂಬಾನಿ ಈ ಮಾತುಗಳನ್ನು ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಕ್ಜನರ ಅಭಿವೃದ್ದಿಗಾಗಿ ನಾವು ಬದ್ಧರಾಗಿದ್ದೇವೆ.ರಿಲಾಯನ್ಸ್ ವಿಶೇಷ ಕಾರ್ಯ ಪಡೆ ರಚಿಸಲಿದೆ.ಜಮ್ಮು ಮತ್ತು ಕಾಶ್ಮೀರ, ಲಡಾಕ್‌ನಲ್ಲಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮುಂಬರುವ ತಿಂಗಳುಗಳಲ್ಲಿ ಹಲವಾರು ಪ್ರಕಟಣೆಗಳನ್ನು ನೀವು ನಮ್ಮಿಂದ ನಿರೀಕ್ಷಿಸಬಹುದು ಎಂದಿದ್ದಾರೆ ಮುಕೇಶ್.

ಆಗಸ್ಟ್ 5ರಂದು ಸಂವಿಧಾನದ 370ನೇ ವಿಧಿಯು ಇನ್ನು ಮುಂದೆ ಜಮ್ಮು ಮತ್ತು ಕಾಶ್ಮೀರಕ್ಕೆ ಅನ್ವಯ ಆಗುವುದಿಲ್ಲ ಎಂಬ ಅಧಿಸೂಚನೆಯನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಹೊರಡಿಸಿದ್ದು, ಈ ರಾಜ್ಯವು ಈವರೆಗೆ ಅನುಭವಿಸಿಕೊಂಡು ಬಂದಿದ್ದ ವಿಶೇಷ ಅಧಿಕಾರ ಮತ್ತು ಸೌಲಭ್ಯಗಳು ಈ ಮೂಲಕ ರದ್ದಾಗಿವೆ,ಅಷ್ಟೇ ಅಲ್ಲದೆ ಈ ರಾಜ್ಯವು ತನ್ನದೇ ಆದ ಪ್ರತ್ಯೇಕ ಧ್ವಜ ಮತ್ತು ಸಂವಿಧಾನವನ್ನು ಹೊಂದಿತ್ತು.ವಿಶೇಷಾಧಿಕಾರ ರದ್ದಾಗುವುದರ ಜತೆಗೆ ಇವೆಲ್ಲವೂ ರದ್ದಾಗಿದ್ದು, ಜಮ್ಮು ಮತ್ತು ಕಾಶ್ಮೀರ, ಲಡಾಕ್‌ನ್ನುಕೇಂದ್ರ ಸರ್ಕಾರ ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿತ್ತು.ಅಕ್ಟೋಬರ್ 31ರಿಂದ ಇವು ಕೇಂದ್ರಾಡಳಿತ ಪ್ರದೇಶವಾಗಿ ಬದಲಾಗಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT