ಭಾನುವಾರ, ಜನವರಿ 19, 2020
28 °C

ಕಟಕ್ ಬಳಿ ಹಳಿ ತಪ್ಪಿದ ಮುಂಬೈ-ಭುವನೇಶ್ವರ ರೈಲು: 20 ಮಂದಿಗೆ ಗಾಯ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಕಟಕ್ (ಒಡಿಶಾ): ಮುಂಬೈನಿಂದ ಭುವನೇಶ್ವರಕ್ಕೆ ತೆರಳುತ್ತಿದ್ದ ಲೋಕಮಾನ್ಯ ತಿಲಕ್ ಎಕ್ಸ್‌ಪ್ರೆಸ್‌ ರೈಲಿನ ಎಂಟು ಬೋಗಿಗಳು ಗುರುವಾರ ಬೆಳಿಗ್ಗೆ ಒಡಿಶಾದ ಕಟಕ್ ಬಳಿ ಹಳಿ ತಪ್ಪಿವೆ. ಅಪಘಾತದಲ್ಲಿ 20 ಮಂದಿ ಗಾಯಗೊಂಡಿದ್ದು, 6 ಜನರ ಸ್ಥಿತಿ ಚಿಂತಾಜನಕವಾಗಿದೆ ಎಂದು ರೈಲ್ವೆ ಸಚಿವಾಲಯ ತಿಳಿಸಿದೆ.

ಲೋಕಮಾನ್ಯ ತಿಲಕ್ ಎಕ್ಸ್‌ಪ್ರೆಸ್ ರೈಲು, ಸರಕು ರೈಲೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಈ ಪ್ರದೇಶದಲ್ಲಿ ಭಾರೀ ಪ್ರಮಾಣದ ಮಂಜು ಆವರಿಸಿತ್ತು ಎಂದು ತಿಳಿದುಬಂದಿದೆ. 

ಗಾಯಾಳುಗಳನ್ನೆಲ್ಲ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ರೈಲು ಸಚಿವಾಲಯ ಮಾಹಿತಿ ನೀಡಿದೆ. 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು