ಶುಕ್ರವಾರ, ಫೆಬ್ರವರಿ 26, 2021
31 °C
ಮುಂಬೈನಲ್ಲಿ ಜನಜೀವನ ಅಸ್ತವ್ಯಸ್ತ

ಮುಂಬೈ, ಕೊಂಕಣ ಕರಾವಳಿಯಲ್ಲಿ ಮಳೆ ಮತ್ತಷ್ಟು ಹೆಚ್ಚಳ ಸಾಧ್ಯತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ: ವಾಣಿಜ್ಯ ನಗರಿ ಮುಂಬೈ ಮತ್ತು ಕೊಂಕಣದ ಕರಾವಳಿ ತೀರ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಪರಿಣಾಮವಾಗಿ ಮುಂಬೈ, ಥಾಣೆ, ನವೀಮುಂಬೈನ ಜನವಸತಿ ಪ್ರದೇಶಗಳಿಗೆ ನೀರು ನುಗ್ಗಿದ್ದು, ನಾಗರಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ. 

ಈ ನಡುವೆ ಶನಿವಾರ ಮತ್ತು ಭಾನುವಾರ ಉತ್ತರ, ದಕ್ಷಿಣ ಕೊಂಕಣ ಪ್ರದೇಶದಲ್ಲಿ (ಆಗಸ್ಟ್‌ 03–04ರ ವರೆಗೆ) ಹೆಚ್ಚಿನ ಮಳೆ ಸುರಿಯುವ ಸಾಧ್ಯೆತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ), ಸ್ಕೈಮೇಟ್‌ ಮುನ್ನೆಚ್ಚರಿಕೆ ನೀಡಿವೆ.

ಮುಂಬೈನಲ್ಲಿ ಶುಕ್ರವಾರದಿಂದಲೂ ಭಾರಿ ಮಳೆಯಾಗುತ್ತಿದ್ದು, ಆರು ಕಡೆಗಳಲ್ಲಿ ಗೋಡೆ ಕುಸಿದ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಮಳೆಯ ಕಾರಣದಿಂದ ಕೆಲವೆಡೆ ರೈಲು ಸಂಚಾರಕ್ಕೆ ತೊಡಕುಂಟಾಗಿದೆ. ಆದರೆ ವೈಮಾನಿಕ ಸೇವೆಯಲ್ಲಿ ಯಾವುದೇ ಅಡಚಣೆಯುಂಟಾಗಿಲ್ಲ. 

ಸಮುದ್ರದಲ್ಲಿ ಭಾರಿ ಪ್ರಮಾಣದ ಉಬ್ಬರವಿಳಿತ 

ಮಳೆಯ ಜತೆಗೇ ಮುಂಬೈನಲ್ಲಿ ಉಬ್ಬರವಿಳಿತ ಪ್ರಮಾಣವೂ ಹೆಚ್ಚಾಗಿದೆ. ಇಂದು ಮಧ್ಯಾಹ್ನ ಒಂದು ಗಂಟೆ ಹೊತ್ತಿಗೆ 4.90 ಮೀಟರ್‌ನಷ್ಟು ಭಾರಿ ಗಾತ್ರದ ಅಲೆಗಳು ತೀರಕ್ಕೆ ಅಪ್ಪಳಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ. ಅಧಿಕ ಮಳೆ ಮತ್ತು ಉಬ್ಬರವಿಳಿತವಿರುವ ಸಂದರ್ಭದಲ್ಲಿ ಜನ ಸಮುದ್ರ ತೀರ ಪ್ರದೇಶಗಳಿಗೆ ಹೋಗುವುದು ಸೂಕ್ತವಲ್ಲ ಎಂಬ ಮುನ್ನೆಚ್ಚರಿಕೆಯನ್ನೂ ರವಾನಿಸಲಾಗಿದೆ.  

ಇದನ್ನೂ ಓದಿ 

ಮಹಾರಾಷ್ಟ್ರದಲ್ಲಿ ಮಳೆ| ರಾಜ್ಯದ ನದಿಗಳಲ್ಲಿ ಪ್ರವಾಹ ಸ್ಥಿತಿ; ಅಪಾಯದಲ್ಲಿ 76ಗ್ರಾಮ

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು