ಮಂಗಳವಾರ, ಮೇ 18, 2021
30 °C
ಕೇರಳದಲ್ಲಿ ಯುವ ಕಾಂಗ್ರೆಸ್ ಕಾರ್ಯರ್ತರ ಹತ್ಯೆ:

ಕೇರಳದಲ್ಲಿ ಕಾಂಗ್ರೆಸ್‌ನಿಂದ ಹರತಾಳ

ಪಿಟಿಐ Updated:

ಅಕ್ಷರ ಗಾತ್ರ : | |

ತಿರುವನಂತಪುರ: ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಭಾನುವಾರ ರಾತ್ರಿ ನಡೆದಿರುವ ಇಬ್ಬರು ಯುವ ಕಾಂಗ್ರೆಸ್ ಕಾರ್ಯಕರ್ತರ ಹತ್ಯೆ ಖಂಡಿಸಿ ರಾಜ್ಯದಾದ್ಯಂತ ಕಾಂಗ್ರೆಸ್ ಸೋಮವಾರ ಹರತಾಳ ನಡೆಸಿತು.

ಕಾಸರಗೋಡಿನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾನುವಾರ ರಾತ್ರಿ ಪಾಲ್ಗೊಂಡು ಮನೆಗೆ ತೆರಳುತ್ತಿದ್ದ ಶರತ್ ಲಾಲ್‌ ಮತ್ತು ಕ್ರಿಪೇಶ್ ಎಂಬುವವರನ್ನು ಅಪಚಿತ ಗುಂಪೊಂದು ಅಡ್ಡಗಟ್ಟಿ ಹತ್ಯೆ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ರಾಜ್ಯ ದಾದ್ಯಂತ ಹರತಾಳಕ್ಕೆ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮೂಲಕ ಕರೆ ನೀಡಿತು. ಈ ಜೋಡಿ ಕೊಲೆಯಲ್ಲಿ ಆಡಳಿತ ಪಕ್ಷ ಸಿಪಿಎಂ ಪಾತ್ರವಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು