ಉಗ್ರ ಹತ್ಯೆ: ಎರಡನೇ ದಿನವೂ ಕರ್ಫ್ಯೂ ಮುಂದುವರಿಕೆ

ಭಾನುವಾರ, ಜೂನ್ 16, 2019
28 °C

ಉಗ್ರ ಹತ್ಯೆ: ಎರಡನೇ ದಿನವೂ ಕರ್ಫ್ಯೂ ಮುಂದುವರಿಕೆ

Published:
Updated:

ಶ್ರೀನಗರ (ಪಿಟಿಐ): ಅಲ್‌ಕೈದಾ ಮುಖಂಡ ಜಾಕೀರ್‌ ಮುಸಾ ಹತ್ಯೆ ಹಿನ್ನೆಲೆಯಲ್ಲಿ, ಕಾಶ್ಮೀರದ ಹಲವೆಡೆ ಹೇರಲಾಗಿದ್ದ ಕರ್ಫ್ಯೂವನ್ನು ಶನಿವಾರವೂ ಮುಂದುವರಿಸಲಾಯಿತು. 

ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದ್ದು, ಸಾಮಾಜಿಕ ಜಾಲತಾಣಗಳ ಮೇಲೆ ನಿಷೇಧ ಹೇರಲಾಗಿದೆ.

‘ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಕಾಶ್ಮೀರ ಕಣಿವೆಯಲ್ಲಿ ಕರ್ಫ್ಯೂ ಮುಂದುವರಿಸಲಾಗಿದೆ. ಬರಾಮುಲ್ಲಾ-ಬನಿಹಾಲ್ ಮಾರ್ಗದ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶ್ರೀನಗರದ ನೌಹಟ್ಟಾ, ರೈನಾವರಿ, ಖನ್ಯಾರ್, ಸಫಕಾದಲ್ ಮತ್ತು ಎಂ ಆರ್ ಗುಂಗ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಾದ ನಿರ್ಬಂಧ ಹೇರಲಾಗಿದೆ. ಮೈಸುಮಾ ಮತ್ತು ಕ್ರಾಲ್‌ಖುಡ್‌ ಪ್ರದೇಶಗಳಲ್ಲಿ ಭಾಗಶಃ ನಿರ್ಬಂಧ ಜಾರಿಯಲಿದೆ.

ಸೂಕ್ಷ್ಮ ಪ್ರದೇಶಗಳಲ್ಲಿ ಹದ್ದಿನ ಕಣ್ಣಿಡಲಾಗಿದೆ. ನಗರದ ಎಲ್ಲೆಡೆ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. 

ಸಾರ್ವಜನಿಕ ಸಾರಿಗೆ ವಾಹನಗಳು ರಸ್ತೆಗಿಳಿದಿಲ್ಲ. ಕಾರು ಮತ್ತು ಆಟೊಗಳ ಸಂಚಾರ ವಿರಳವಾಗಿತ್ತು.

ಪುಲ್ವಾಮಾ ಜಿಲ್ಲೆಯಲ್ಲಿ ಶುಕ್ರವಾರ ಭದ್ರತಾ ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಉಗ್ರ ಮೂಸಾ ಹತ್ಯೆಯಾಗಿದ್ದ. ಈ ದಾಳಿಯನ್ನು ವಿರೋಧಿಸಿ ನಗರದಲ್ಲಿ ಪ್ರತಿಭಟನೆ, ಬಂದ್‌ ನೆಡೆದಿತ್ತು. ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಕರ್ಫ್ಯೂ ಹೇರಲಾಗಿದೆ. 

 

 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !