ಶನಿವಾರ, ಸೆಪ್ಟೆಂಬರ್ 25, 2021
22 °C

ಸಂಗೀತ ಶಿಕ್ಷಕನಿಂದ ಲೈಂಗಿಕ ದೌರ್ಜನ್ಯ: ದೂರು ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ: ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ 55 ವರ್ಷ ಪ್ರಾಯದ ಸಂಗೀತ ಶಿಕ್ಷಕನನ್ನು  ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಆರೋಪಿಯನ್ನು ಭಾರತ್ ಪಂಚಾಲಿ ಅಲಿಯಾಸ್ ರಾಜು ಎಂದು ಗುರುತಿಸಲಾಗಿದೆ. ದೂರು ದಾಖಲಿಸಿರುವ ಸಂತ್ರಸ್ತೆ ಬಾಲಕಿಯಾಗಿರುವಾಗ ಲೈಂಗಿಕ ದೌರ್ಜನ್ಯ ನಡೆದಿದೆ. ಬಳಿಕ ಅವರು ಉನ್ನತ ಶಿಕ್ಷಣಕ್ಕಾಗಿ ವಿದೇಶಕ್ಕೆ ತೆರಳಿದ್ದಾರೆ. 

2007ರಿಂದ 2010ರವರೆಗೂ ಆರೋಪಿಯು ಗೀಟಾರ್‌ ಹೇಳಿ ಕೊಡಲು ದೂರುದಾರಳ ಮನೆಗೆ ಹೋಗುತ್ತಿದ್ದ. ಈ ವೇಳೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಸ್ತುತ ಸಂತ್ರಸ್ತೆಯು ಅಮೆರಿಕ ಕಾಲೇಜಿನಲ್ಲಿ ಕಲಿಯುತ್ತಿದ್ದಾರೆ, ಭಾನುವಾರ ಮುಂಬೈಗೆ ಬಂದ ಅವರು ಆರೋಪಿ ಸಂಗೀತ ಶಿಕ್ಷಕನ ವಿರುದ್ದ ದೂರು ದಾಖಲಿಸಿದ್ದಾರೆ.  ಪ್ರಕರಣವನ್ನು ದಾಖಲಿಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. 

ಆರೋಪಿಯು ಸಂಗೀತ ತರಗತಿಯ ಸಮಯದಲ್ಲಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಹಾಗೂ ಅಶ್ಲೀಲ ಮಾತುಗಳನ್ನು ಆಡುತ್ತಿದ್ದ ಎಂದು ದೂರಿನಲ್ಲಿ ಹೇಳಲಾಗಿದೆ.

ಆರೋಪಿಯ ಮೇಲೆ ಭಾರತೀಯ ದಂಡ ಸಂಹಿತೆ 354 (ಲೈಂಗಿಕ ಕಿರುಕುಳ)  509 (ಅಪಮಾನ) ಮತ್ತು 506 (ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು