ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ₹ 51 ಸಾವಿರ ನೀಡಿದ ಮುಸ್ಲಿಂ ನಾಯಕ

Last Updated 15 ನವೆಂಬರ್ 2019, 6:23 IST
ಅಕ್ಷರ ಗಾತ್ರ

ಲಖನೌ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಉತ್ತರ ಪ್ರದೇಶದ ಶಿಯಾ ಸೆಂಟ್ರಲ್ ವಕ್ಫ್ ಮಂಡಳಿಯ ಅಧ್ಯಕ್ಷ ವಾಸಿಂ ರಿಜ್ಮಿ ₹ 51,000 ದೇಣಿಗೆ ನೀಡುವುದಾಗಿ ಘೋಷಿಸಿದ್ದಾರೆ.

ಈ ಕುರಿತುಎನ್‌ಡಿಟಿವಿಗೆ ಪ್ರತಿಕ್ರಿಯಿಸಿದರಿಜ್ವಿ,ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವನ್ನು ಶಿಯಾ ವಕ್ಫ್‌ ಮಂಡಳಿಯು ಬೆಂಬಲಿಸಿತ್ತು.ದಶಕಗಳಿಗೂ ಹಳೆಯ ಅಯೋಧ್ಯೆಸಮಸ್ಯೆ ಕುರಿತು ಸುಪ್ರೀಂ ಕೋರ್ಟ್ ಉತ್ತಮ ತೀರ್ಪು ನೀಡಿದೆ ಎಂದು ಹೇಳಿದರು.

ನಮ್ಮೆಲ್ಲರಿಗೂ ಭಗವಾನ್ ರಾಮನು ಪೂರ್ವಜ. ಇದಕ್ಕೆ ಮುಸ್ಲಿಮರು ಕೂಡ ಹೊರತಾಗಿಲ್ಲ.ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಿದ್ಧತೆಗಳು ನಡೆಯುತ್ತಿವೆ. ರಾಮಮಂದಿರ ನಿರ್ಮಾಣಕ್ಕೆ ರಾಮಜನ್ಮಭೂಮಿ ನ್ಯಾಸ್‌ಗೆ ₹ 51,000 ದೇಣಿಗೆ ನೀಡಲಾಗುತ್ತದೆ ಎಂದು ಹೇಳಿದರು.

ರಾಮಮಂದಿರವನ್ನು ಯಾವಾಗ ನಿರ್ಮಿಸಿದರೂ ಶಿಯಾ ವಕ್ಫ್ ಮಂಡಳಿ ಸಹಕಾರ ನೀಡಲಿದೆ. ಅಯೋಧ್ಯೆಯಲ್ಲಿರುವ ರಾಮಮಂದಿರವು ಭಾರತವಲ್ಲದೆ ವಿಶ್ವದಾದ್ಯಂತ ಇರುವ ರಾಮಭಕ್ತರಿಗೆ ಹೆಮ್ಮೆಯ ವಿಷಯವಾಗಿದೆ ಎಂದು ತಿಳಿಸಿದರು.

ನವೆಂಬರ್ 9ರಂದು ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್, ವಿವಾದಿತ ಜಾಗ ರಾಮಲಲ್ಲಾಗೆ ಸೇರಿದ್ದು. ಅಲ್ಲಿ ರಾಮಮಂದಿರ ನಿರ್ಮಿಸಬೇಕು. ಸುನ್ನಿ ವಕ್ಫ್‌ ಬೋರ್ಡ್‌ಗೆ ಮಸೀದಿ ನಿರ್ಮಾಣಕ್ಕೆ ಬೇರೆಡೆ ಪ್ರತ್ಯೇಕ 5 ಎಕರೆ ಭೂಮಿ ನೀಡಬೇಕು ಎಂದು ಆದೇಶದಲ್ಲಿ ತಿಳಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT