ನವದೆಹಲಿ: ಪೌರತ್ವ (ತಿದ್ದುಪಡಿ) ಮಸೂದೆಯು ಸಂವಿಧಾನದ ಮೂಲ ಆಶಯಗಳಿಗೆ ವಿರುದ್ಧವಾಗಿದೆ ಎಂದು ಹೇಳಿರುವ ಜಮಾತ್ ಉಲೇಮಾ ಎ ಹಿಂದ್, ಈ ಕಾಯ್ದೆಯನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಲಾಗುವುದು ಎಂದು ಹೇಳಿದೆ.

ರಾಜ್ಯಸಭೆಯಲ್ಲಿ ಬುಧವಾರ ರಾತ್ರಿ ಮಸೂದೆಗೆ ಅಂಗೀಕಾರ ದೊರೆತ ಕೆಲವೇ ನಿಮಿಷಗಳ ನಂತರ ಪ್ರತಿಕ್ರಿಯೆ ನೀಡಿದ ಜಮಾತ್ನ ಅಧ್ಯಕ್ಷ ಮೌಲಾ ಅರ್ಷದ್ ಮದನಿ,‘ಇದೊಂದು ದುರಂತ’ ಎಂದು ಬಣ್ಣಿಸಿದರು.

ಇದನ್ನೂ ಓದಿ:Explainer | ಏನಿದು ಪೌರತ್ವ ತಿದ್ದುಪಡಿ ಮಸೂದೆ?

‘ಶಾಸಕಾಂಗವು ತನ್ನ ಕೆಲಸವನ್ನು ಸರಿಯಾಗಿ ಕೆಲಸ ಮಾಡಿಲ್ಲ. ಹೀಗಾಗಿ ಅದರ ನಿರ್ಧಾರವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲು ತೀರ್ಮಾನಿಸಿದ್ದೇವೆ.ಈಗಾಗಲೇ ವಕೀಲರನ್ನು ಸಂಪರ್ಕಿಸಿದ್ದೇವೆ. ನಮ್ಮ ಅರ್ಜಿಯ ಕರಡು ಸಿದ್ಧವಾಗಿದೆ. ಕೋರ್ಟ್ನಲ್ಲಿ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ’ ಎಂದು ಮದನಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

‘ಲೋಕಸಭೆಯಲ್ಲಿ ಮಸೂದೆಗೆ ಅಂಗೀಕಾರ ದೊರೆತ ನಂತರ, ರಾಜ್ಯಸಭೆಯಲ್ಲಿ ಮಸೂದೆಗೆ ಅಂಗೀಕಾರ ದೊರೆಯದಂತೆ ಮಾಡಲುಜಮಾತ್ ತನ್ನ ಕೈಲಾದ ಎಲ್ಲ ಪ್ರಯತ್ನ ಮಾಡಿತು. ವಿವಿಧ ಪಕ್ಷಗಳ ಸದಸ್ಯರನ್ನು ಭೇಟಿಯಾಗಿ ಮಸೂದೆಯ ದುಷ್ಪರಿಣಾಮಗಳನ್ನು ಮನವರಿಕೆ ಮಾಡಿಕೊಡಲು ಯತ್ನಿಸಿದೆವು.ಆದರೆ ಜಾತ್ಯತೀತ ಎಂದು ಹೇಳಿಕೊಳ್ಳುವ ಹಲವು ರಾಜಕೀಯ ಪಕ್ಷಗಳ ನಾಯಕರು ಬೇಜವಾಬ್ದಾರಿ ನಡವಳಿಕೆ ತೋರಿದರು. ಹೀಗಾಗಿಯೇ ಈ ಮಸೂದೆಗೆ ರಾಜ್ಯಸಭೆಯ ಅಂಗೀಕಾರ ದೊರೆಯಿತು’ಎಂದು ಮದನಿ ಹೇಳಿದ್ದಾರೆ.

‘ಧರ್ಮದ ಆಧಾರದ ಮೇಲೆ ಯಾವುದೇ ನಾಗರಿಕನನ್ನು ಪ್ರತ್ಯೇಕಿಸಬಾರದು. ಎಲ್ಲರನ್ನೂ ಸಮಾನವಾಗಿ ಕಾಣಬೇಕು ಎನ್ನುವುದು ನಮ್ಮ ಸಂವಿಧಾನದ ಆಶಯ.ಈ ಮಸೂದೆಯು ಸಂವಿಧಾನದ 14 ಮತ್ತು 15ನೇ ವಿಧಿಯನ್ನು ಉಲ್ಲಂಘಿಸುತ್ತದೆ. ದೇಶದ ಭದ್ರತೆ ಮತ್ತು ಸುರಕ್ಷೆಗೂ ಧಕ್ಕೆ ತರುತ್ತದೆ’ಎಂದು ಅಭಿಪ್ರಾಯಪಟ್ಟಿದ್ದಾರೆ.

‘ಮಸೂದೆಯ ದುಷ್ಪರಿಣಾಮಗಳು ಈಗ ನಮಗೆ ಕಾಣಿಸದಿರಬಹುದು. ಆದರೆ ಒಮ್ಮೆ ರಾಷ್ಟ್ರೀಯ ಪೌರತ್ವ ನೋಂದಣಿ ದೇಶವ್ಯಾಪಿ ಆರಂಭವಾದ ನಂತರ ಲಕ್ಷಾಂತರ ಮುಸ್ಲಿಮರ ಬದುಕಿನ ಮೇಲೆ ಇದರ ಪರಿಣಾಮ ಎದ್ದು ಕಾಣುತ್ತದೆ.ಇದು ಹಿಂದೂ–ಮುಸ್ಲಿಮರ ವಿವಾದವಲ್ಲ. ಬದಲಾಗಿ ಮನುಷ್ಯನ ಮೂಲಭೂತ ಹಕ್ಕುಗಳ ವಿಚಾರ’ಎಂದು ವಿಶ್ಲೇಷಿಸಿದ್ದಾರೆ.

ಇನ್ನಷ್ಟು...

ಸಂಪಾದಕೀಯ |ಪೌರತ್ವ ಮಸೂದೆ: ಧರ್ಮ ನಿರಪೇಕ್ಷ ಪರಂಪರೆಗೆ ಕಪ್ಪುಚುಕ್ಕೆ

ಪೌರತ್ವ ತಿದ್ದುಪಡಿ ಮಸೂದೆ: ಅಮಿತ್ ಶಾ ಮೇಲೆ ನಿರ್ಬಂಧ ವಿಧಿಸಲು ಅಮೆರಿಕ ಆಯೋಗ ಮನವಿ

ಪೌರತ್ವ ತಿದ್ದುಪಡಿ ಮಸೂದೆಗೆ ಅಸ್ತು

ಪೌರತ್ವ ಮಸೂದೆಗೆ ವಿರೋಧ: ಮತ್ತೆ ವಿಭಜನೆಯತ್ತ ಭಾರತ ಎಂದ ಒವೈಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.