ಗುರುವಾರ , ಫೆಬ್ರವರಿ 27, 2020
19 °C
ಸುಪ್ರೀಂ ಕೋರ್ಟ್‌ಗೆ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಮಂಡಳಿ

ನಮಾಜ್‌ ಸಲ್ಲಿಸಲು ಮಹಿಳೆಯರಿಗೂ ಮಸೀದಿ ಪ್ರವೇಶ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಪುರುಷರ ರೀತಿಯಲ್ಲಿ ಮಹಿಳೆಯರಿಗೂ ನಮಾಜ್‌ ಸಲ್ಲಿಸಲು ಮಸೀದಿ ಪ್ರವೇಶಕ್ಕೆ ಅನುಮತಿ ಇದೆ ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯು (ಎಐಎಂಪಿಎಲ್‌ಬಿ) ಸುಪ್ರೀಂ ಕೋರ್ಟ್‌ಗೆ ಬುಧವಾರ ತಿಳಿಸಿದೆ.

ಮಸೀದಿಗಳಲ್ಲಿ ಮುಸ್ಲಿಂ ಮಹಿಳೆಯರಿಗೆ ಪ್ರವೇಶ ಕಲ್ಪಿಸಲು ನ್ಯಾಯಾಂಗ ಮಧ್ಯಪ್ರವೇಶಿಸಬೇಕು ಎಂದು ಯಾಸ್ಮೀನ್‌ ಝುಬೇರ್‌ ಅಹ್ಮದ್‌ ಪೀರ್ಜಾದೆ ಎನ್ನುವವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಮಂಡಳಿಯು ನ್ಯಾಯಾಲಯಕ್ಕೆ ಈ ಉತ್ತರ ನೀಡಿದೆ.

‘ನಮಾಜ್‌ ಅಥವಾ ಪ್ರಾರ್ಥನೆ ಸಲ್ಲಿಸಲು ಮುಸ್ಲಿಂ ಮಹಿಳೆ ಮುಕ್ತವಾಗಿ ಮಸೀದಿ ಪ್ರವೇಶಿಸಬಹುದಾಗಿದೆ. ಇದು ಮಹಿಳೆಯ ಆಯ್ಕೆ’ ಎಂದು ಮಂಡಳಿಯ ಕಾರ್ಯದರ್ಶಿ ಎಂ.ಆರ್‌. ಶಮಶಾದ್‌ ಅವರು ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ತಿಳಿಸಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಎಸ್‌.ಎ. ಬೊಬಡೆ ನೇತೃತ್ವದ ಒಂಬತ್ತು ನ್ಯಾಯಮೂರ್ತಿಗಳನ್ನು ಒಳಗೊಂಡ ಸಾಂವಿಧಾನಿಕ ಪೀಠವು, ಮಂಡಳಿಯ ಹೇಳಿಕೆಯನ್ನು ಪರಿಶೀಲನೆ ನಡೆಸಲಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು