ಮತದಾರರ ಪಟ್ಟಿಯಲ್ಲಿ ಜ್ವಾಲಾ ಗುಟ್ಟಾ ಹೆಸರಿಲ್ಲ: ಟ್ವಿಟರ್‌ನಲ್ಲಿ ಆಕ್ರೋಶ

7
ತೆಲಂಗಾಣ ವಿಧಾನಸಭಾ ಚುನಾವಣೆ –2018

ಮತದಾರರ ಪಟ್ಟಿಯಲ್ಲಿ ಜ್ವಾಲಾ ಗುಟ್ಟಾ ಹೆಸರಿಲ್ಲ: ಟ್ವಿಟರ್‌ನಲ್ಲಿ ಆಕ್ರೋಶ

Published:
Updated:

ನವದೆಹಲಿ: ತೆಲಂಗಾಣ ವಿಧಾನಸಭಾ ಚುನಾವಣೆಯ ಮತದಾರರ ಪಟ್ಟಿಯಲ್ಲಿ ಬ್ಯಾಡ್ಮಿಂಟನ್‌ ಆಟಗಾರ್ತಿ ಜ್ವಾಲಾ ಗುಟ್ಟಾ ಅವರು ತಮ್ಮ ಹೆಸರು ಕಣ್ಮರೆಯಾಗಿದೆ ಎಂದು ಆರೋಪಿಸಿದ್ದಾರೆ.

ಈ ಕುರಿತು ಟ್ವಿಟರ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಅವರು, ‘ಮತದಾರರ ಪಟ್ಟಿಯನ್ನು ಪರಿಶೀಲಿಸಿದಾಗ ನನ್ನ ಹೆಸರು ಕಣ್ಮರೆಯಾಗಿರುವುದನ್ನು ಕಂಡು ಆಶ್ಚರ್ಯವಾಯಿತು’ ಎಂದು ಹೇಳಿದ್ದಾರೆ.

‘ಕಳೆದ 2 –3 ವಾರಗಳ ಹಿಂದೆ ಆನ್‌ಲೈನ್‌ನಲ್ಲಿ ಮತದಾರರ ಪಟ್ಟಿಯನ್ನು ಪರಿಶೀಲಿಸಿದಾಗ ನನ್ನ ಹಾಗೂ ತಾಯಿಯ ಹೆಸರು ಪಟ್ಟಿಯಲ್ಲಿತ್ತು. ಆದರೆ ತಂದೆ ಹಾಗೂ ತಂಗಿಯ ಹೆಸರು ಕಣ್ಮರೆಯಾಗಿತ್ತು. ಮತದಾರರ ಪಟ್ಟಿಯಲ್ಲಿ ನನ್ನ ಹೆಸರು ಇದ್ದ ಕಾರಣಕ್ಕೆ ಇಂದು ಬೆಳಿಗ್ಗೆ ಮತ ಚಲಾಯಿಸಲು ಹೋದಾಗ ಪಟ್ಟಿಯಲ್ಲಿ ಹೆಸರು ಇರಲಿಲ್ಲ’ ಎಂದು ಹೇಳಿದ್ದಾರೆ.

ಜ್ವಾಲಾ ಅವರ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಸಾರ್ವಜನಿಕರು ತಮಗೂ ಇದೇ ರೀತಿ ಸಮಸ್ಯೆಯಾಗಿದೆ ಎಂದು ಹೇಳಿದ್ದಾರೆ.

ಸದ್ಯ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಕಾಂಗ್ರೆಸ್‌ ನೇತೃತ್ವದ ಮೈತ್ರಿ ಪಕ್ಷಗಳು(ಟಿಡಿಪಿ, ಟಿಜೆಎಸ್‌, ಸಿಪಿಐ) ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್‌) ಹಾಗೂ ಬಿಜೆಪಿ ಪಕ್ಷಗಳ ನಡುವೆ ತೀವ್ರ ಹಣಾಹಣಿ ನಡೆಯುತ್ತಿದೆ.

ಇದೇ ಮೊದಲ ಬಾರಿಗೆ ಚುನಾವಣಾ ಆಯೋಗ ಮತದಾನಕ್ಕೆ ಬಳಕೆಯಾಗುತ್ತಿರುವ ಮತ ಖಾತರಿಪಡಿಸುವ ವೋಟರ್‌ ವೆರಿಫೈಡ್‌ ಪೇಪರ್‌ ಆಡಿಟ್‌ (ವಿವಿ ಪ್ಯಾಡ್‌) ಯಂತ್ರಗಳನ್ನು ಬಳಸಿದೆ.

ಮುಂದಿನ ವರ್ಷ ಲೋಕಸಭಾ ಚುನಾವಣೆ ನಡೆಯಲಿದೆ. ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್‌ ರಾವ್‌ ಅವರು ಸೆ.6ರಂದು ಅವಧಿಗೂ ಮುನ್ನವೇ ವಿಧಾನಸಭೆಯನ್ನು ವಿಸರ್ಜಿಸಿದ್ದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !