ವಿಶೇಷ ಸ್ಥಾನಮಾನಕ್ಕೆ ಆಗ್ರಹ: ಚಂದ್ರಬಾಬು ನಾಯ್ಡು ಉಪವಾಸ ಸತ್ಯಾಗ್ರಹ

7

ವಿಶೇಷ ಸ್ಥಾನಮಾನಕ್ಕೆ ಆಗ್ರಹ: ಚಂದ್ರಬಾಬು ನಾಯ್ಡು ಉಪವಾಸ ಸತ್ಯಾಗ್ರಹ

Published:
Updated:

ನವದೆಹಲಿ: ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ದೆಹಲಿಯ ಆಂಧ್ರ ಪ್ರದೇಶ ಭವನದಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಸೋಮವಾರ ಉಪವಾಸ  ಸತ್ಯಾಗ್ರಹ ಆರಂಭಕ್ಕೂ ಮುನ್ನ  ತೆಲುಗುದೇಶಂ ಪಕ್ಷ (ಟಿಡಿಪಿ) ಸಂಸದರು ರಾಜ್‌ಘಾಟ್‌ನ ಮಹಾತ್ಮ ಗಾಂಧಿ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು. 

ಎರಡು ವಿಶೇಷ ರೈಲುಗಳಲ್ಲಿ ಪ್ರತಿಭಟನಾಕಾರರು ಆಂಧ್ರಪ್ರದೇಶದಿಂದ ದೆಹಲಿಗೆ ಬಂದಿಳಿದಿದ್ದಾರೆ. ಜತೆಗೆ, ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಪ್ರತಿಭಟನೆಗೆ ಬೆಂಬಲ ನೀಡಿದ್ದಾರೆ.

ಇದನ್ನೂ ಓದಿ... ಪ್ರಧಾನಿ–ಆಂಧ್ರ ಮುಖ್ಯಮಂತ್ರಿ ಜಗಳ್‌ಬಂದಿ

ಪ್ರಧಾನಿ ಮೋದಿ ಅವರ ಭೇಟಿ ವಿರೋಧಿಸಿ ಭಾನುವಾರ ಆಂಧ್ರ ಪ್ರದೇಶ ಮತ್ತು ತಮಿಳುನಾಡಿನಲ್ಲಿ ಪ್ರತಿಭಟನೆ, ಧರಣಿ ಭುಗಿಲೆದ್ದಿವೆ.

ಆಂಧ್ರ ಪ್ರದೇಶದಲ್ಲಿ ಟಿಡಿಪಿ, ಕಾಂಗ್ರೆಸ್‌ ಮತ್ತು ಎಡ ಪಕ್ಷಗಳು ಸೇರಿದಂತೆ ವಿರೋಧ ಪಕ್ಷಗಳು ಕರಾಳ ದಿನಾಚರಣೆಗೆ ಕರೆ ನೀಡಿದ್ದವು.

ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆದಿಯಾಗಿ ಟಿಡಿಪಿ ನಾಯಕರು ಕಪ್ಪುಬಟ್ಟೆ ಧರಿಸಿ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. ಎರಡೂ ರಾಜ್ಯಗಳಲ್ಲಿ ‘ಮೋದಿ ಗೋ ಬ್ಯಾಕ್‌’ ಅಭಿಯಾನ ತೀವ್ರಗೊಂಡಿದ್ದು, ಕಪ್ಪು ಬಾವುಟ ಪ್ರದರ್ಶನ ಮಾಡಲಾಗಿದೆ.

ಆಂಧ್ರ ಪ್ರದೇಶದಲ್ಲಿ ಟಿಡಿಪಿ ಕಾರ್ಯಕರ್ತರು ಮತ್ತು ತಮಿಳುನಾಡಿನಲ್ಲಿ ವೈಕೊ ನೇತೃತ್ವದಲ್ಲಿ ಅವರ ಎಂಡಿಎಂಕೆ ಪಕ್ಷದ ಕಾರ್ಯಕರ್ತರು ಕಪ್ಪು ಬಲೂನ್‌ ಹಾರಿ ಬಿಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ... 'Go Back Modi' ಅಂದರೆ ದೆಹಲಿಗೆ ಹೋಗಿ ಮತ್ತೆ ಅಧಿಕಾರದಲ್ಲಿ ಕುಳಿತುಕೊಳ್ಳಿ: ಮೋದಿ

ಕೇಂದ್ರ ಸರ್ಕಾರ ತಮ್ಮ ರಾಜ್ಯಗಳಿಗೆ ಅನ್ಯಾಯ ಮಾಡಿದೆ ಎಂದು ಪ್ರತಿಭಟನಕಾರರು ಆರೋಪಿಸಿದ್ದರು.

ಸಾಮಾಜಿಕ ಜಾಲತಾಣಗಳಲ್ಲಿ ಆರಂಭವಾಗಿರುವ ‘ಮೋದಿ ಗೋ ಬ್ಯಾಕ್‌’ ಅಭಿಯಾನಕ್ಕೆ ಭಾರಿ ಬೆಂಬಲ ಮತ್ತು ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದಕ್ಕೆ ಪ್ರತಿಯಾಗಿ ಬಿಜೆಪಿಯು ‘ಮೋದಿಗೆ ಸ್ವಾಗತ’ ಅಭಿಯಾನ ಅರಂಭಿಸಿದೆ.

ಇನ್ನಷ್ಟು... 

ಚಂದ್ರಬಾಬು ನಾಯ್ಡು ರಾಜ್ಯದ ಅಭಿವೃದ್ಧಿ ಮರೆತಿದ್ದಾರೆ: ಪ್ರಧಾನಿ ನರೇಂದ್ರ ಮೋದಿ

ವೈಎಸ್‌ಆರ್ ಕಾಂಗ್ರೆಸ್ ಸಂಸದರ ರಾಜೀನಾಮೆ

ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆ?

ಎನ್‌ಡಿಎ ಮೈತ್ರಿಕೂಟ ತ್ಯಜಿಸಿದ ಟಿಡಿಪಿ

ಬರಹ ಇಷ್ಟವಾಯಿತೆ?

 • 6

  Happy
 • 1

  Amused
 • 1

  Sad
 • 0

  Frustrated
 • 1

  Angry

Comments:

0 comments

Write the first review for this !