ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌.ಡಿ.ತಿವಾರಿ ಪುತ್ರ ನಿಧನ

ಮೃತ ಸ್ಥಿತಿಯಲ್ಲಿ ಆಸ್ಪತ್ರೆಗೆ ಕರೆತರಲಾಗಿತ್ತು.
Last Updated 16 ಏಪ್ರಿಲ್ 2019, 18:13 IST
ಅಕ್ಷರ ಗಾತ್ರ

ನವದೆಹಲಿ: ಉತ್ತರಾಖಂಡ ಮಾಜಿ ಮುಖ್ಯಮಂತ್ರಿ ದಿವಂಗತ ಎನ್‌.ಡಿ.ತಿವಾರಿ ಅವರ ಪುತ್ರ ರೋಹಿತ್‌ ಶೇಖರ್‌ ಅವರನ್ನು ಮೃತಸ್ಥಿತಿಯಲ್ಲಿ ಇಲ್ಲಿನ ಮ್ಯಾಕ್ಸ್‌ ಆಸ್ಪತ್ರೆಗೆ ಮಂಗಳವಾರ ತರಲಾಗಿದೆ.

ರೋಹಿತ್‌ ಶೇಖರ್‌ ದಕ್ಷಿಣ ದೆಹಲಿಯ ಡಿಫೆನ್ಸ್‌ ಕಾಲೊನಿಯಲ್ಲಿ ವಾಸವಾಗಿದ್ದರು. ಆಸ್ಪತ್ರೆಗೆ ಕರೆತಂದಾಗ ರೋಹಿತ್‌ ಶೇಖರ್‌ ಮೃತಪಟ್ಟಿದ್ದರು ಎಂದು ಮ್ಯಾಕ್ಸ್‌ ಆಸ್ಪತ್ರೆ ವೈದ್ಯರು ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆದರೆ, ರೋಹಿತ್‌ ಸಾವಿಗೆ ಕಾರಣ ಏನು ಎಂಬುದು ಇನ್ನೂ ಗೊತ್ತಾಗಿಲ್ಲ ಎಂದೂ ಪೊಲೀಸರು ತಿಳಿಸಿದ್ದಾರೆ.

ಕೋರ್ಟ್‌ ಆದೇಶದಂತೆ 2012ರಲ್ಲಿ ಡಿಎನ್‌ಎ ಪರೀಕ್ಷೆ ನಡೆಸಲಾಯಿತಲ್ಲದೇ, ತಿವಾರಿ ಅವರೇ ರೋಹಿತ್‌ನ ಜೈವಿಕ ತಂದೆ ಎಂಬುದು ದೃಢಪಟ್ಟಿತು. ನಂತರ ತಿವಾರಿ ಅವರು ರೋಹಿತ್‌ನನ್ನು ತಮ್ಮ ಪುತ್ರ ಎಂದು ಒಪ್ಪಿಕೊಂಡಿದ್ದರು.

2017ರಲ್ಲಿ ಉತ್ತರಾಖಂಡ ವಿಧಾನಸಭೆಗೆ ಚುನಾವಣೆ ನಡೆಯುತ್ತಿದ್ದ ಸಂದರ್ಭದಲ್ಲಿ ರೋಹಿತ್‌ ಶೇಖರ್‌ ತಮ್ಮ ತಂದೆ ತಿವಾರಿ ಹಾಗೂ ಅಮಿತ್‌ ಶಾ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT