ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೀನಾ ಕಮ್ಯುನಿಸ್ಟ್ ಪಕ್ಷ–ಕಾಂಗ್ರೆಸ್ ನಡುವೆ ಒಡಂಬಡಿಕೆ: ನಡ್ಡಾ

Last Updated 23 ಜೂನ್ 2020, 6:26 IST
ಅಕ್ಷರ ಗಾತ್ರ

ನವದೆಹಲಿ: ಗಡಿ ಬಿಕ್ಕಟ್ಟಿನ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ದೇಶವನ್ನು ವಿಭಜಿಸುವಂತಹ ಹೇಳಿಕೆ ನೀಡುತ್ತಿದ್ದು, ಸಶಸ್ತ್ರ ಪಡೆಗಳ ಸ್ಥೈರ್ಯಗುಂದಿಸಲು ಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಮಂಗಳವಾರ ಆರೋಪಿಸಿದ್ದಾರೆ. ‘ರಾಹುಲ್ ಅವರ ಈ ನಡೆಯು ಚೀನಾದ ಕಮ್ಯುನಿಸ್ಟ್ ಪಕ್ಷ ಹಾಗೂ ಕಾಂಗ್ರೆಸ್ ಪಕ್ಷದ ನಡುವಿನ ಒಡಂಬಡಿಕೆಯ ಪರಿಣಾಮವೇ?’ ಎಂದು ಅವರು ಪ್ರಶ್ನಿಸಿದ್ದಾರೆ.

‘ಮೊದಲಿಗೆ ಚೀನಾದ ಕಮ್ಯುನಿಸ್ಟ್ ಪಕ್ಷದ ಜೊತೆ ಕಾಂಗ್ರೆಸ್‌ ಒಪ್ಪಂದಕ್ಕೆ ಸಹಿ ಹಾಕಿತು. ಚೀನಾಕ್ಕೆ ಭಾರತದ ಭೂ ಭಾಗವನ್ನು ಒಪ್ಪಿಸಿತು. ದೋಕಲಾ ವಿಷಯದಲ್ಲಿ ರಾಹುಲ್ ಅವರು ರಹಸ್ಯವಾಗಿ ಚೀನಾ ರಾಯಭಾರ ಕಚೇರಿಗೆ ಭೇಟಿ ನೀಡಿದರು. ಅವರ ಈಗಿನ ಹೇಳಿಕೆಗಳು ಉಭಯ ಪಕ್ಷಗಳ ನಡುವಿನ ಒಪ್ಪಂದದ ಫಲವೇ ಇರಬೇಕು’ ಎಂದು ಅವರು ಆರೋಪಿಸಿದ್ದಾರೆ.

ಉಭಯ ಪಕ್ಷಗಳು ಉನ್ನತ ಮಟ್ಟದ ವಿನಿಮಯ ನಡೆಸಲು ಹಾಗೂ ಪ್ರಮುಖ ಪ್ರಾದೇಶಿಕ ಮತ್ತು ಅಂತರರಾಷ್ಟ್ರೀಯ ವಿಷಯಗಳ ಬಗ್ಗೆ ಪರಸ್ಪರ ಸಮಾಲೋಚನೆ ನಡೆಸುವ ತಿಳಿವಳಿಕೆ ಒಪ್ಪಂದಕ್ಕೆ 2008ರಲ್ಲಿ ಸಹಿ ಹಾಕಿದ್ದವು. ಆಗ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದ ರಾಹುಲ್ ಗಾಂಧಿ ಹಾಗೂ ಈಗಿನ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರು ಸಹಿ ಹಾಕಿದ್ದರು.

ಚೀನಾ ಜೊತೆಗಿನ ಗಡಿ ವಿವಾದವನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸೂಕ್ತವಾಗಿ ನಿಭಾಯಿಸುತ್ತಿಲ್ಲ ಎಂದು ರಾಹುಲ್ ಗಾಂಧಿ ಅವರು ನಿರಂತರವಾಗಿ ಆರೋಪಿಸುತ್ತಿದ್ದಾರೆ. ಕಳೆದ ವಾರ ಲಡಾಖ್‌ನಲ್ಲಿ ನಡೆದ ಘರ್ಷಣೆಯಲ್ಲಿ ಭಾರತದ 20 ಯೋಧರು ಹುತಾತ್ಮರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT