ಶನಿವಾರ, ಜೂನ್ 19, 2021
26 °C

ನಾಗಪುರ | 4 ವರ್ಷದ ಬಾಲಕಿಯ ಅತ್ಯಾಚಾರ; ಕಠುವಾ ಶಿಕ್ಷೆ ಬೆನ್ನಲ್ಲೇ ಮತ್ತೊಂದು ಘಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಾಗಪುರ: ನಾಲ್ಕು ವರ್ಷದ ಪುಟ್ಟ ಬಾಲಕಿಯನ್ನು 25 ವರ್ಷ ವಯಸ್ಸಿನ ಕಾಮುಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ಮಹಾರಾಷ್ಟ್ರದ ನಾಗಪುರ ಜಿಲ್ಲೆಯ ವಾಡಿಯಲ್ಲಿ ನಡೆದಿದೆ.

ಎಂಟು ವರ್ಷದ ಬಾಲಕಿಯನ್ನು ಸಾಮೂಹಿಕ ಅತ್ಯಾಚಾರ ನಡೆಸಿ ಹತ್ಯೆಗೈದ ಕಠುವಾ ಪ್ರಕರಣದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿ 24 ಗಂಟೆ ಕಳೆಯುವ ಮುನ್ನವೇ ಪುಟ್ಟ ಬಾಲಕಿಯನ್ನು ಅತ್ಯಾಚಾರ ಗೈದಿರುವುದು ವರದಿಯಾಗಿದೆ. 

* ಇದನ್ನೂ ಓದಿ: ಕಠುವಾ ಪ್ರಕರಣ | ಮಾಸ್ಟರ್‌ಮೈಂಡ್‌ ಸಾಂಜಿ ರಾಮ್‌, ಇತರ ಇಬ್ಬರಿಗೆ ಜೀವಾವಧಿ ಶಿಕ್ಷೆ

ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಭೂಷಣ್‌ ದಹಾತ್‌ ಎಂದು ಗುರುತಿಸಲಾಗಿದೆ. ಆತ ಬಾಲಕಿಗೆ ಅಶ್ಲೀಲ ವಿಡಿಯೊಗಳನ್ನು ತೋರಿಸಿ, ಅತ್ಯಾಚಾರ ಎಸಗಿದ್ದಾನೆ ಎಂದು ಇನ್‌ಸ್ಪೆಕ್ಟರ್‌ ಆರ್‌.ಎಲ್‌.ಪಾಠಕ್‌ ತಿಳಿಸಿದ್ದಾರೆ. 

ಐಪಿಸಿ ಸೆಕ್ಷನ್‌ 376ರ ಅಡಿ ಪ್ರಕರಣ ದಾಖಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

* ಇದನ್ನೂ ಓದಿ: ಕಠುವಾ ಅತ್ಯಾಚಾರ: ಅಪರಾಧಿಗಳಿಗೆ ಮರಣದಂಡನೆ ವಿಧಿಸಲು ಒತ್ತಾಯ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು