ಭಾನುವಾರ, ಫೆಬ್ರವರಿ 23, 2020
19 °C

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಧ್ವನಿ ಎತ್ತಲು ನಟಿ ನಂದಿತಾ ದಾಸ್‌ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜೈಪುರ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಹೋರಾಟವನ್ನು ಬೆಂಬಲಿಸಿರುವ ನಟಿ ನಂದಿತಾ ದಾಸ್‌, ಕಾಯ್ದೆಗೆ ತೀವ್ರ ಪ್ರತಿರೋಧ ತೋರುವಂತಹ ‘ಶಹೀನ್‌ ಬಾಗ್‌‘ ಸ್ವರೂಪದ ಪ್ರದೇಶಗಳು ದೇಶದ ಎಲ್ಲ ಕಡೆಗಳಲ್ಲಿ ಸೃಷ್ಟಿಯಾಗಲಿವೆ ಎಂದು ಭವಿಷ್ಯ ನುಡಿದರು.

ಜೈಪುರ ಸಾಹಿತ್ಯ ಸಮ್ಮೇಳನದ ಗೋಷ್ಠಿಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಅವರು, ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದರು. ‘ನಾಲ್ಕು ತಲೆಮಾರುಗಳಿಂದಲೂ ಇಲ್ಲಿ ನೆಲೆಸಿರುವ ಜನರಿಗೆ ತಾವು ಭಾರತೀಯರು ಎಂಬುದನ್ನು ನಿರೂಪಿಸುವಂತೆ ಸರ್ಕಾರ ಕೇಳುತ್ತಿದೆ. ಈ ಧೋರಣೆ ವಿರುದ್ಧ ಪ್ರತಿಯೊಬ್ಬರೂ ಧ್ವನಿ ಎತ್ತಬೇಕು’ ಎಂದು ಪ್ರತಿಪಾದಿಸಿದರು.

‘ಆರ್ಥಿಕ ಹಿಂಜರಿತ, ನಿರುದ್ಯೋಗ ಹೆಚ್ಚಳ ಹಾಗೂ ಧರ್ಮದ ಆಧಾರದ ಮೇಲೆ ಜನರನ್ನು ಒಡೆದಾಳುವ ನೀತಿಯಿಂದಾಗಿ ಭಾರತ ಈಗ ಜಗತ್ತಿನೆಲ್ಲಡೆ ಸುದ್ದಿಯಲ್ಲಿದೆ’ ಎಂದು ಅಭಿಪ್ರಾಯಪಟ್ಟರು.

‘ನಮ್ಮ ಸಂವಿಧಾನ ಎಲ್ಲರಿಗೂ ಸಮಾನತೆ ಕಲ್ಪಿಸಿದೆ. ಧರ್ಮ, ಲಿಂಗ ಆಧಾರದ ಪ್ರತ್ಯೇಕತೆಯನ್ನು ನಾವು ಬಯಸುವುದಿಲ್ಲ’ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಜೈಪುರ ಸಾಹಿತ್ಯ ಸಮ್ಮೇಳನದ ಒಂದು ನೋಟ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು