ಮೋದಿ – ಜಿನ್‌ಪಿಂಗ್ ಭೇಟಿ: ಬ್ಯಾನರ್ ಅಳವಡಿಸಲು ಮದ್ರಾಸ್ ಹೈಕೋರ್ಟ್ ಅನುಮತಿ

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಹಾಗೂ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಅವರಿಗೆ ಸ್ವಾಗತ ಕೋರುವ ಬ್ಯಾನರ್‌ಗಳನ್ನು ಅಳವಡಿಸಲು ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಗುರುವಾರ ಅನುಮತಿ ನೀಡಿದೆ.
ಮೋದಿ ಹಾಗೂ ಜಿನ್‌ಪಿಂಗ್ ಅವರ ಅನೌಪಚಾರಿಕ ಭೇಟಿ ಮುಂದಿನ ವಾರ ಮಾಮಲ್ಲಾಪುರಂನಲ್ಲಿ ನಿಗದಿಯಾಗಿದೆ.
ಬ್ಯಾನರು ಅಳವಡಿಸಲು ಯಾವುದೇ ಆಕ್ಷೇಪವಿಲ್ಲ ಎಂದು ನ್ಯಾಯಾಲಯ ತಿಳಿಸಿದೆ. ಆದರೆ ರಾಜಕೀಯ ಪಕ್ಷಗಳಿಗೆ ಬ್ಯಾನರ್ ಅಳವಡಿಸಲು ಅನುಮತಿ ನೀಡುವುದಿಲ್ಲ ಎಂದೂ ಸ್ಪಷ್ಟಪಡಿಸಿದೆ.
ರಸ್ತೆ ಬದಿಯಲ್ಲಿ ಬ್ಯಾನರ್‌ಗಳನ್ನು ಸ್ಥಾಪಿಸುವುದಕ್ಕೆ ಈ ಹಿಂದೆ ನ್ಯಾಯಾಲಯ ನಿಷೇಧ ಹೇರಿತ್ತು.
ಹೋರ್ಡಿಂಗ್‌ಗೆ ಸ್ಕೂಟರ್ ಡಿಕ್ಕಿ ಹೊಡೆದು ಈಚೆಗೆ ಸಂಭವಿಸಿದ ಅಪಘಾತದಲ್ಲಿ ಮಹಿಳಾ ಟೆಕಿಯೊಬ್ಬರು ಮೃತಪಟ್ಟಿದ್ದರು. ಅನಂತರ ಇವುಗಳನ್ನು ತೆರವುಗೊಳಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ನ್ಯಾಯಾಲಯ ಸರ್ಕಾರಕ್ಕೆ ಸೂಚಿಸಿತ್ತು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.