ವಾರಣಾಸಿಯಲ್ಲಿ 68ನೇ ಜನ್ಮದಿನ ಆಚರಿಸಿಕೊಳ್ಳಲಿರುವ ನರೇಂದ್ರ ಮೋದಿ

7

ವಾರಣಾಸಿಯಲ್ಲಿ 68ನೇ ಜನ್ಮದಿನ ಆಚರಿಸಿಕೊಳ್ಳಲಿರುವ ನರೇಂದ್ರ ಮೋದಿ

Published:
Updated:

ವಾರಣಾಸಿ: ಪ್ರಧಾನಮಂತ್ರಿ ನರೇಂದ್ರಮೋದಿ ಅವರು ವಿಧಾನಸಭೆಯಲ್ಲಿ ತಾವು ಪ್ರತಿನಿಧಿಸುವ ಕ್ಷೇತ್ರ ಉತ್ತರಪ್ರದೇಶದ ವಾರಣಾಸಿಯಲ್ಲಿ ಸೆಪ್ಟೆಂಬರ್‌ 17ರಂದು ತಮ್ಮ 68ನೇ ಜನ್ಮದಿನವನ್ನು ಆಚರಿಸಿಕೊಳ್ಳಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸಂಬಂಧ ಸಿದ್ಧತೆ ಮಾಡಿಕೊಳ್ಳುವ ಸಲುವಾಗಿ ಪ್ರಧಾನಮಂತ್ರಿ ಕಚೇರಿಯು ವಾರಣಾಸಿ ಜಿಲ್ಲಾಡಳಿತಕ್ಕೆ ತಾತ್ಕಾಲಿಕ ವೇಳಾಪಟ್ಟಿಯನ್ನು ಕಳುಹಿಸಿಕೊಟ್ಟಿದೆ.

‘ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಮೋದಿ ಅವರು ಶಿವನಿಗೆ ಪ್ರಾರ್ಥನೆ ಸಲ್ಲಿಸಲಿದ್ದಾರೆ. ನಂತರ ತಮ್ಮ ಬದುಕಿಗೆ ಸ್ಫೂರ್ತಿಯಾದ ‘ಚಲೋ ಜೀತ್ ಹೈ’ ಚಲನಚಿತ್ರವನ್ನು ಇಲ್ಲಿನ ಕೆಲವು ಶಾಲಾ ಮಕ್ಕಳೊಂದಿಗೆ ವೀಕ್ಷಿಸಲಿದ್ದಾರೆ. ಆದರೆ, ಅದಕ್ಕಾಗಿ ಇನ್ನೂ ಸ್ಥಳ ನಿಗದಿಯಾಗಿಲ್ಲ’ ಎಂದು ಅಧಿಕಾರಿಗಳು ಹೇಳಿದ್ದಾರೆ.

ಜನ್ಮದಿನ ಆಚರಣೆ ವೇಳೆ ಬನಾರಸ್‌ ಹಿಂದೂ ವಿವಿ, ಬಾದತ್‌ಪುರ್‌–ಶಿವಪುರ್‌ ಚತುಷ್ಪಥ ರಸ್ತೆ ಕಾಮಗಾರಿ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.

ಬರಹ ಇಷ್ಟವಾಯಿತೆ?

 • 14

  Happy
 • 2

  Amused
 • 1

  Sad
 • 2

  Frustrated
 • 3

  Angry

Comments:

0 comments

Write the first review for this !