ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೀನಾ ವಿಚಾರವಾಗಿ ಮೋದಿ ಜೊತೆ ಟ್ರಂಪ್‌ ಚರ್ಚೆ: ಮಾತುಕತೆ ನಡೆದೇ ಇಲ್ಲವೆಂದ ಭಾರತ

Last Updated 29 ಮೇ 2020, 5:04 IST
ಅಕ್ಷರ ಗಾತ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವೆ ಇತ್ತೀಚೆಗೆ ಯಾವುದೇ ವಿಚಾರವಾಗಿ ಮಾತುಕತೆ ನಡೆದಿಲ್ಲ ಎಂದು ಸರ್ಕಾರಿ ಮೂಲಗಳು ಶುಕ್ರವಾರ ತಿಳಿಸಿವೆ.

ಪೂರ್ವ ಲಡಾಕ್‌ನಲ್ಲಿ ಚೀನಾ-ಭಾರತ ಗಡಿರೇಖೆ ಕುರಿತು ಮೋದಿ ಅವರೊಂದಿಗೆ ಮಾತನಾಡಿದ್ದೇನೆ. ಚೀನಾ ವಿಚಾರವಾಗಿ ಭಾರತ ಪ್ರಧಾನಿ ಮೋದಿ ಉತ್ತಮ ಮನಸ್ಥಿತಿಯಲ್ಲಿಲ್ಲ ಎಂದು ಟ್ರಂಪ್ ವಾಷಿಂಗ್ಟನ್‌ನಲ್ಲಿ ಹೇಳಿದ್ದರು.

ಗಡಿ ವಿವಾದವನ್ನು ಬಗೆಹರಿಸಲು ಭಾರತ ಮತ್ತು ಚೀನಾ ನಡುವೆ ಮಧ್ಯಸ್ಥಿಕೆ ವಹಿಸಲು ಟ್ರಂಪ್ ಮಂಗಳವಾರ ಪ್ರಸ್ತಾಪಿಸಿದ್ದರು.

ಇದಕ್ಕೆ ಸ್ಪಷ್ಟೀಕರಣವೆಂಬಂತೆ, 'ಮೋದಿ ಮತ್ತು ಟ್ರಂಪ್ ನಡುವಿನ ಕೊನೆಯ ಸಂಭಾಷಣೆ ಏಪ್ರಿಲ್ 4 ರಂದು ಹೈಡ್ರಾಕ್ಸಿಕ್ಲೋರೋಕ್ವಿನ್ ವಿಷಯದ ಬಗ್ಗೆ ನಡೆದಿದೆ' ಎಂದು ಸರ್ಕಾರಿ ಮೂಲಗಳು ತಿಳಿಸಿದೆ.

ಸಮಸ್ಯೆಯನ್ನು ಪರಿಹರಿಸಲು ರಾಜತಾಂತ್ರಿಕ ಕಾರ್ಯವಿಧಾನಗಳಮೂಲಕ ಭಾರತವು ನೇರವಾಗಿ ಚೀನಾದೊಂದಿಗೆ ಸಂಪರ್ಕದಲ್ಲಿದೆ ಎಂದು ವಿದೇಶಾಂಗ ಸಚಿವಾಲಯ ಗುರುವಾರ ಸ್ಪಷ್ಟಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT