ಉಗ್ರರ ವಿರುದ್ಧ ದಾಳಿ ನಡೆಸುವ ಮುನ್ನ ಯೋಧರು ಚುನಾವಣಾ ಆಯೋಗದ ಅನುಮತಿ ಪಡೆಯಬೇಕೇ?

ಶುಕ್ರವಾರ, ಮೇ 24, 2019
23 °C

ಉಗ್ರರ ವಿರುದ್ಧ ದಾಳಿ ನಡೆಸುವ ಮುನ್ನ ಯೋಧರು ಚುನಾವಣಾ ಆಯೋಗದ ಅನುಮತಿ ಪಡೆಯಬೇಕೇ?

Published:
Updated:

ಖುಷಿನಗರ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ವಿರೋಧ ಪಕ್ಷಗಳಿಗೆ ಸೋಲು ಸಂಭವಿಸಲಿದ್ದು, ಜನರು ಈಗಿರುವ ಸರ್ಕಾರಕ್ಕೆ ಮತ ಹಾಕಲಿದ್ದಾರೆ ಎಂದು ನರೇಂದ್ರ ಮೋದಿ ಹೇಳಿದ್ದಾರೆ.

ಭಾನುವಾರ ಉತ್ತರ ಪ್ರದೇಶದ ಖುಷಿನಗರದಲ್ಲಿ ಚುನಾವಣಾ ಪ್ರಚಾರ ಮಾಡಿದ ಮೋದಿ, ಲೋಕಸಭಾ ಚುನಾವಣೆಯಲ್ಲಿ ವಿರೋಧ ಪಕ್ಷಗಳು ಪರಾಭವಗೊಳ್ಳಲಿವೆ. ಯಾಕೆಂದರೆ ಜನರು ವಾಸ್ತವಿಕ ಮತ್ತು ಪ್ರಾಮಾಣಿಕ ಸರ್ಕಾರಕ್ಕೆ ಮತ ಹಾಕುತ್ತಿದ್ದಾರೆ.

ತಮ್ಮ ಭಾಷಣದಲ್ಲಿ ಸಮಾಜವಾದಿ ಪಕ್ಷ-ಬಿಎಸ್‌ಪಿ ವಿರುದ್ಧ ವಾಗ್ದಾಳಿ ಮಾಡಿದ ಅವರು ಉತ್ತರಪ್ರದೇಶದಲ್ಲಿ ಅಖಿಲೇಶ್ ಯಾದವ್ ಮತ್ತು ಮಾಯಾವತಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ್ದಕ್ಕಿಂತ ಹೆಚ್ಚು ಅವಧಿ ನಾನು ಗುಜರಾತಿನಲ್ಲಿ ಮುಖ್ಯಮಂತ್ರಿಯಾಗಿದ್ದೆ. ಆದರೆ ಅಲ್ಲಿ ಭ್ರಷ್ಟಾಚಾರ ನಡೆದಿರಲಿಲ್ಲ.

ಅಲ್ವಾರ್ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಉಲ್ಲೇಖಿಸಿ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ವಿರುದ್ಧ ಟೀಕಾಪ್ರಹಾರ ನಡೆಸಿದ ಮೋದಿ, ಸಂತ್ರಸ್ತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುವುದನ್ನು ನಿಲ್ಲಿಸಿ ಎಂದಿದ್ದಾರೆ.ನೀವು ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡಿದ್ದರೆ ರಾಜಸ್ಥಾನದಲ್ಲಿ ಕಾಂಗ್ರೆಸ್‌ಗೆ ನೀಡಿದ್ದ ಬೆಂಬಲವನ್ನು ಯಾಕೆ ಹಿಂಪಡೆಯಲಿಲ್ಲ? ಕಾಂಗ್ರೆಸ್ ಸರ್ಕಾರವೂ ಈ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸುತ್ತಿದೆ. ಯಾಕೆಂದರೆ ಆ ಪಕ್ಷದ ವಿಚಾರವೇ ಆಗಿದ್ದು ಆಗಿ ಹೋಯ್ತು ಎನ್ನುವುದು ಎಂದು 1984 ಸಿಖ್ ನರಮೇಧದ ಬಗ್ಗೆ  ಸ್ಯಾಮ್ ಪಿತ್ರೋಡಾ ಹೇಳಿಕೆಯನ್ನು ಮೋದಿ ಉಲ್ಲೇಖಿಸಿದ್ದಾರೆ.

ಜಮ್ಮು ಕಾಶ್ಮೀರದ ಶೋಪಿಯಾನ್  ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ ನಡೆದ ಎನ್‌ಕೌಂಟರ್‌ನ್ನು ಉಲ್ಲೇಖಿಸಿದ ಮೋದಿ, ಚುನಾವಣೆ ನಡೆಯುತ್ತಿರುವ ಹೊತ್ತಲ್ಲಿ ಭದ್ರತಾ ಪಡೆ ಉಗ್ರರ ವಿರುದ್ಧ ಗುಂಡು ಹಾರಿಸುತ್ತಿದೆ ಎಂದು ವಿಪಕ್ಷಗಳ ಹೇಳುತ್ತಿವೆ. ಹಾಗಾದರೆ ಉಗ್ರರ ಮೇಲೆ ಗುಂಡಿನ ದಾಳಿ ನಡೆಸುವಾಗ ನಮ್ಮ ಯೋಧರು ಚುನಾವಣಾ ಆಯೋಗದ ಅನುಮತಿ ಪಡೆಯಬೇಕೇ? ವಿಪಕ್ಷದವರು ಅದೇನು ನಾಟಕ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 4

  Happy
 • 0

  Amused
 • 0

  Sad
 • 0

  Frustrated
 • 8

  Angry

Comments:

0 comments

Write the first review for this !