ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ–ಮಮತಾ ಭೇಟಿ; ಪಶ್ಚಿಮ ಬಂಗಾಳದಲ್ಲಿ ಪ್ರಧಾನಿಗೆ ಪ್ರತಿಭಟನೆಯ ಸ್ವಾಗತ

Last Updated 11 ಜನವರಿ 2020, 12:46 IST
ಅಕ್ಷರ ಗಾತ್ರ

ಕೋಲ್ಕತ್ತ: ಪಶ್ಚಿಮ ಬಂಗಾಳ ಪ್ರವಾಸದಲ್ಲಿರುವ ಪ್ರಧಾನಿಮೋದಿ ಅವರನ್ನುಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರುಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿಪ್ರಕ್ರಿಯೆಗಳನ್ನು ತೀವ್ರವಾಗಿ ವಿರೋಧಿಸುತ್ತ ಬಂದಿರುವಮಮತಾ ಬ್ಯಾನರ್ಜಿ ಮತ್ತು ಪ್ರಧಾನಿ ಮೋದಿ ನಡುವಿನ ಭೇಟಿ ವಿಚಾರ ಸಾರ್ವಜನಿಕ ವಲಯದಲ್ಲಿ ಕುತೂಹಲ ಮೂಡಿಸಿತ್ತು.

ಭೇಟಿ ಬಳಿಕ ಮಾತನಾಡಿರುವ ಮಮತಾ ಬ್ಯಾನರ್ಜಿ, ‘ಪ್ರಧಾನಿ ಮೋದಿ ಅವರು ಪಶ್ಚಿಮ ಬಂಗಾಳಕ್ಕೆ ಬಂದಿದ್ದಾರೆ. ಇದು ಕೇವಲ ಸೌಜನ್ಯದ ಭೇಟಿಯಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿಗಳನ್ನು ರಾಜ್ಯದ ಜನರು ಒಪ್ಪಿಕೊಳ್ಳುತ್ತಿಲ್ಲ. ಆ ಕಾರಣ, ನೀವು ತೆಗೆದುಕೊಂಡ ನಿರ್ಧಾರಗಳ ಬಗ್ಗೆ ಪುನರ್ವಿಮರ್ಶೆ ಮಾಡುವುದು ಒಳಿತು,’ ಎಂದು ಪ್ರಧಾನಿ ಅವರಿಗೆ ಹೇಳಿರುವುದಾಗಿ ಮಮತಾ ತಿಳಿಸಿದ್ದಾರೆ.

ಎರಡು ದಿನಗಳ ಕಾಲ ಪಶ್ಚಿಮ ಬಂಗಾಳ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು ಶನಿವಾರ ಕೋಲ್ಕತ್ತಾ ವಿಮಾನ ನಿಲ್ದಾಣಕ್ಕೆ ಬಂದಿಳಿದ್ದಾರೆ. ವಿಮಾನ ನಿಲ್ದಾಣದ ಸುತ್ತ ಬಿಗಿ ಭದ್ರತೆ ಇದ್ದರೂ, ಮೋದಿ ಅವರಿಗೆ ಪ್ರತಿಭಟನೆಯ ಸ್ವಾಗತ ದೊರೆತಿದೆ.

ಸಿಎಎ ಮತ್ತು ಎನ್‌ಆರ್‌ಸಿ ವಿರೋಧಿಸಿ ತೃಣಮೂಲ ಕಾಂಗ್ರೆಸ್‌ ಮತ್ತು ಎಡ ಪಕ್ಷಗಳ ಕಾರ್ಯಕರ್ತರು ಪ್ರತ್ಯೇಕವಾಗಿ ಪ್ರತಿಭಟನೆಗಳನ್ನು ಹಮ್ಮಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT