ಗುರುವಾರ , ಏಪ್ರಿಲ್ 9, 2020
19 °C

ಕೊರೊನಾ ಸೋಂಕಿನ ಬಗ್ಗೆ ಜನರು ಭಯಪಡುವ ಅಗತ್ಯವಿಲ್ಲ: ಪ್ರಧಾನಿ ಮೋದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಕೊರೊನಾ ಸೋಂಕಿನ ಬಗ್ಗೆ ದೇಶದ ಜನರು ಹೆಚ್ಚು ಆತಂಕ ಪಡಬೇಕಾದ ಅಗತ್ಯವಿಲ್ಲ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಹೇಳಿದ್ದಾರೆ. 

ಭಾರತೀಯ ಜನಔಷಧಿ ಪರಿ ಯೋಜನಾ ಫಲಾನುಭವಿಗಳೊಂದಿಗೆ ವಿಡಿಯೊ ಕಾನ್ಪರೆನ್ಸ್‌ ಮೂಲಕ ಸಂವಾದ ನಡೆಸಿದ ಅವರು, ಇದು ಕೇವಲ ರಾಷ್ಟ್ರೀಯ ಜನಔಷಧಿ ದಿವಸ ಅಲ್ಲ. ಇದು ಲಕ್ಷಾಂತರ ಭಾರತೀಯರನ್ನು ಒಂದುಗೂಡಿಸುವ ವಿಶೇಷ ಸಂದರ್ಭವಾಗಿದೆ. ಲಕ್ಷಾಂತರ ಜನರು ಈ ಯೋಜನೆಯಿಂದ ಅನುಕೂಲ ಪಡೆದಿದ್ದಾರೆ’ ಎಂದು ಪ್ರಧಾನಿ ಮೋದಿ ತಿಳಿಸಿದರು.

ಹಸ್ತಲಾಘವ ಕಡಿಮೆಗೊಳಿಸಿ ನಮಸ್ತೆಯ ಮೂಲಕ ಶುಭಕೋರಿ ಎಂದು ಅವರು ಹೇಳಿದರು.

ಭಾರತದಲ್ಲಿ ಈವರೆಗೆ ಒಟ್ಟು 31 ಜನರಿಗೆ ಕೊರೊನಾ ಸೋಂಕು ತಗಲಿರುವುದು ದೃಡಪಟ್ಟಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು