ಶುಕ್ರವಾರ, ಸೆಪ್ಟೆಂಬರ್ 20, 2019
21 °C

ಭಾರತ ಪ್ರಸಿದ್ದ ವ್ಯಕ್ತಿಯೊಬ್ಬರನ್ನು ಕಳೆದುಕೊಂಡಿದೆ: ನರೇಂದ್ರ ಮೋದಿ

Published:
Updated:

ನವದೆಹಲಿ: ಖ್ಯಾತ ವಕೀಲ, ಮಾಜಿ ಕೇಂದ್ರ ಸಚಿವ ರಾಮ್ ಜೇಠ್ಮಲಾನಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ನ್ಯಾಯಾಲಯ ಮತ್ತು ಸಂಸತ್‌ಗೆ ಮಹತ್ವದ ಕೊಡುಗೆ ನೀಡಿದ್ದ ಅಸಾಧಾರಣ ವಕೀಲ ಮತ್ತು ಪ್ರಸಿದ್ಧ ವ್ಯಕ್ತಿಯಾಗಿದ್ದರು  ರಾಮ್ ಜೇಠ್ಮಲಾನಿ. ಅವರು ಹಾಸ್ಯ ಪ್ರವೃತ್ತಿಯಿರುವ, ಧೈರ್ಯಶಾಲಿ ವ್ಯಕ್ತಿಯಾಗಿದ್ದು, ಯಾವುದೇ ವಿಷಯದ ಬಗ್ಗೆ ತಮ್ಮ ಅಭಿಪ್ರಾಯವನ್ನು ದಿಟ್ಟತನದಿಂದ ವ್ಯಕ್ತಪಡಿಸುತ್ತಿದ್ದರು ಎಂದು ಮೋದಿ ಟ್ವೀಟಿಸಿದ್ದಾರೆ. 

ಇದನ್ನೂ ಓದಿಹಿರಿಯ ನ್ಯಾಯವಾದಿ ರಾಮ್ ಜೇಠ್ಮಲಾನಿ ನಿಧನ

 ಜೇಠ್ಮಲಾನಿ ಭಾನುವಾರ ಬೆಳಗ್ಗೆ ಸ್ವಗೃಹದಲ್ಲಿ ನಿಧನರಾಗಿದ್ದು, ಸಂಜೆ ಅಂತಿಮ ಸಂಸ್ಕಾರ ನಡೆಯಲಿದೆ.

 6 ಬಾರಿ ರಾಜ್ಯಸಭಾ ಸದಸ್ಯರಾಗಿದ್ದ ಅವರು ವಾಜಪೇಯಿ ನೇತೃತ್ವದ ಸರ್ಕಾರದಲ್ಲಿ  ಕಾನೂನು ಮತ್ತು ನಗರಾಭಿವೃದ್ಧಿ ಸಚಿವರಾಗಿದ್ದರು.
 

Post Comments (+)