ಶನಿವಾರ, ಮಾರ್ಚ್ 6, 2021
28 °C

ದೇಶದ ಪ್ರಧಾನಿಯಾಗಿ ಮೋದಿ ಪದಗ್ರಹಣ

ಏಜೆನ್ಸಿಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ನರೇಂದ್ರ ಮೋದಿ ಅವರು ದೇಶದ 15ನೇ ಪ್ರಧಾನಮಂತ್ರಿಯಾಗಿ ಗುರುವಾರ ಪ್ರಮಾಣವಚನ ಸ್ವೀಕರಿಸಿದರು. 

ಲೋಕಸಭೆ ಚುನಾವಣೆಯಲ್ಲಿ 303 ಸೀಟುಗಳನ್ನು ಗೆದ್ದಿರುವ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿಯು, ಮಿತ್ರ ಪಕ್ಷಗಳ ಜತೆಗೇ ಸರ್ಕಾರ ರಚನೆ ಮಾಡಿದೆ. ನರೇಂದ್ರ ಮೋದಿ ಅವರು ಎರಡನೇ ಬಾರಿಗೆ ಪ್ರಧಾನಿಯಾಗಿದ್ದಾರೆ. 

ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮೋದಿ ಅವರಿಗೆ ರಾಷ್ಟ್ರಪತಿ ರಾಮನಾಥ್‌ ಪ್ರಮಾಣ ವಚನ ವಿಧಿ ಬೋಧನೆ ಮಾಡಿದರು. ಮೋದಿ ಅವರು ಈಶ್ವರನ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.  ಮೋದಿ ಅವರ ಪದಗ್ರಹಣದ ನಂತರ ರಾಜನಾಥ್‌ ಸಿಂಗ್‌, ಅಮಿತ್‌ ಶಾ, ನಿತಿನ್‌ ಖಡ್ಕರಿ ಅವರು ಪ್ರಮಾಣ ವಚನ ಪಡೆದರು. 

ಇದಾದ ನಂತರ ರಾಜ್ಯದ ಸಂಸದ ಸದಾನಂದ ಗೌಡ ಮತ್ತು ನಿರ್ಮಲಾ ಸೀತಾರಾಮನ್‌ ಅವರು ಪ್ರಮಾಣ ವಚನ ಸ್ವೀಕರಿಸಿದರು. ಸದಾನಂದ ಗೌಡ ಅವರು ಇಂಗ್ಲಿಷ್‌ನಲ್ಲಿ ಪ್ರಮಾಣ ವಚನ ಪಡೆದರು. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು