ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಳೆಯಿಂದ ಮುಖ್ಯಮಂತ್ರಿಗಳ ಜತೆ ಪ್ರಧಾನಿ ಮೋದಿ ಮಾತುಕತೆ

Last Updated 15 ಜೂನ್ 2020, 10:45 IST
ಅಕ್ಷರ ಗಾತ್ರ

ನವದೆಹಲಿ: ಕೊರೊನಾ ಸೋಂಕು ಹರಡುವುದನ್ನು ತಡೆಯುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಇದೇ 16ರ ಮಂಗಳವಾರ ಮತ್ತು 17ರ ಬುಧವಾರ ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸುವರು.

ಪಂಜಾಬ್‌, ಕೇರಳ, ಗೋವಾ, ಉತ್ತರಾಖಂಡ ಸೇರಿದಂತೆ 21 ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್‌ ಗವರ್ನರ್‌ಗಳು ಮತ್ತು ಆಡಳಿತಾಧಿಕಾರಿಗಳ ಜತೆ ಮೋದಿ ಅವರು ಮಂಗಳವಾರ ಮಧ್ಯಾಹ್ನ ವಿಡಿಯೊ ಕಾನ್ಫರೆನ್ಸ್‌ ನಡೆಸುವರು.

ಬುಧವಾರ ಕರ್ನಾಟಕ, ಮಹಾರಾಷ್ಟ್ರ, ದೆಹಲಿ, ಪಶ್ಚಿಮ ಬಂಗಾಳ, ಗುಜರಾತ್‌, ಬಿಹಾರ, ಉತ್ತರ ಪ್ರದೇಶ ಸೇರಿದಂತೆ 15 ರಾಜ್ಯಗಳು ಮತ್ತು ಜಮ್ಮು ಕಾಶ್ಮೀರದ ಲೆಫ್ಟಿನೆಂಟ್‌ ಗವರ್ನರ್‌ ಅವರೊಂದಿಗೆ ಚರ್ಚಿಸುವರು.

ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ಎರಡು ದಿನಗಳ ಈ ವಿಡಿಯೊ ಸಂವಾದ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT